ಹುಬ್ಬಳ್ಳಿ: ವಾಸ್ತು ಹಾಗೂ ಜೋತಿಷ್ಯ ವಲಯದಲ್ಲಿಸಾಕಷ್ಟು ಹೆಸರುಗಳಿಸಿದ್ದ ಬಾಗಲಕೋಟೆಯವರಾದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ದುಷ್ಕರ್ಮಿಗಳು ಹುಬ್ಬಳ್ಳಿಯ ಶ್ರೀನಗರ ಕ್ರಾಸ್ ಬಳಿಯ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಭೀಕರವಾಗಿ ಹತ್ಯೆ ದುರದುಷ್ಟಕರ.
‘ಸರಳ ವಾಸ್ತು’ ಎನ್ನುವ ಪರಿಕಲ್ಪನೆಯೊಂದಿಗೆ ಸಾಕಷ್ಟು ಜನಮನ್ನಣೆ ಗಳಿಸಿದ್ದ ಚಂದ್ರಶೇಖರ್ ಗುರೂಜಿ ಹೀಗೆ ಹತ್ಯೆಯಾಗಿದ್ದು ವಾಸ್ತುಪ್ರಿಯರಲ್ಲಿ ಹಾಗೂ ಅವರ ಅಭಿಮಾನಿಗಳಿಗೆ ಬಹುದೊಡ್ಡ ಆಶ್ಚರ್ಯವನ್ನು ತಂದಿದೆ.
ಸರಳ ವಾಸ್ತು ಚಂ
ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲತಃ ಬಾಗಲಕೋಟೆ ನಗರದ ಮೋಟಗಿ ಗಲ್ಲಿಯ ನಿವಾಸಿಯಾಗಿದ್ದರು. ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದರು. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಿವಾಸ ಹೊಂದಿದ್ದರು.
ಮೋಟಗಿ ಗಲ್ಲಿಯ ವಿರೂಪಾಕ್ಷಪ್ಪ ಅಂಗಡಿ, ನೀಲವ್ವ ಅಂಗಡಿಯವರ ಪುತ್ರನಾಗಿದ್ದ ಗುರೂಜಿ, ಆರು ಮಂದಿ ಮಕ್ಕಳಲ್ಲಿ ಚಂದ್ರಶೇಖರ ಮೂರನೇಯವರಾಗಿದ್ದರು.
ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮುಗಿಸಿ ನೌಕರಿ ಅರಸಿ ಅವರು ಮೂರೂವರೆ ದಶಕಗಳ ಹಿಂದೆ ಮುಂಬಯಿಗೆ ತೆರಳಿದ್ದರು. ಆರಂಭದಲ್ಲಿ ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಅವರು, ನಂತರ ಸರಳ ವಾಸ್ತು ಆರಂಭಿಸಿದ್ದರು. ಮುಂಬಯಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ವಾಸಿಸುತ್ತಿದ್ದರು.
ಗುರೂಜಿ ಅವರ ಮೊದಲ ಪತ್ನಿ ನಿಧನರಾಗಿದ್ದಾರೆ. ಅವರಿಗೆ ಒಬ್ಬರು ಮಗಳಿದ್ದಾರೆ. ಇನ್ನೊಬ್ಬ ಪತ್ನಿ ಕೂಡ ಇದ್ದು ಅವರಿಗೆ ಮಕ್ಕಳಿಲ್ಲ.
ಸರಳ ವಾಸ್ತು ಪ್ರವರ್ಧಮಾನಕ್ಕೆ ಬಂದ ನಂತರ ವಾಸ್ತುಪ್ರಿಯರಲ್ಲಿ ಜನಪ್ರಿಯತೆ ಗಳಿಸಿದ್ದ ಇವರು, ಒಬ್ಬ ಸ್ಟಾರ್ ವಾಸ್ತು ತಜ್ಞ ಎನ್ನಲಾಗುತಿತ್ತು.
*ಸಚಿವ, ಶಾಸಕರ ಜೊತೆಗೆ ವ್ಯವಹಾರ, ವಹಿವಾಟು*
ಶ್ರೀ ಚಂದ್ರಶೇಖರ ಗುರೂಜಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಪ್ರಭಾವಿ ಶಾಸಕರು, ಸಚಿವರ ಜೊತೆಗೆ ರಿಯಲ್ ಎಸ್ಟೇಟ್ ವ್ಯವಹಾರ, ಹೊಟೇಲ್ ಉದ್ಯಮಿ ಮತ್ತು ಮುಂತಾದ ವ್ಯವಹಾರ ಹೊಂದಿದ್ದರು. ಕೋಟ್ಯಾಂತರ ರೂಪಾಯಿಗಳ ವ್ಯವಹಾರ ಜನಪ್ರತಿನಿಧಿಗಳ ಜೊತೆಗೆ ಹೊಂದಿದ್ದು ಈಗ ಕೊಲೆಯಾದ ನಂತರ ಬಹಳ ಆಶಕ್ತಿ ಉಂಟು ಮಾಡಿದೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …