ಹುಬ್ಬಳ್ಳಿ; ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ ಮುಗಿಸಿ ತೆರಳುವಾಗ ನಿಡಸೋಸಿ ಮಠದ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಧಾರವಾಡದ ತೆಗೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿಕಾರು ಪಲ್ಟಿಯಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜಿಗಳಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಗ್ಗೆ ಮತ್ತಷ್ಟು ಮಾಹಿತಿ ನೀರಿಕ್ಷಿಸಲಾಗಿದೆ. ಘಟನಾ ಸ್ಥಳಕ್ಕ ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.
