ಹೊಸದಿಲ್ಲಿ: ಧರ್ಮಸ್ಥಳ ಧರ್ಮಾಧಿಕಾರಿ ಸೇರಿದಂತೆ ನಾಲ್ವರನ್ನು ಕೇಂದ್ರ ಸರ್ಕಾರವು ರಾಜ್ಯಸಭೆಗೆ ಮಾಡಿದೆ. ಖ್ಯಾತ ಅಥ್ಲೀಟ್ ಪಿ.ಟಿ. ಉಷಾ ಮತ್ತು ಸಂಗೀತ ಸಂಯೋಜಕ, ಗೀತರಚನೆಕಾರ ಮತ್ತು ಗಾಯಕ ಇಳಯರಾಜ ಹಾಗೂ ವಿಜಯೇಂದ್ರ ಪ್ರಸಾದ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ವೈಯುಕ್ತಿಕ ವಾಗಿ ನನಗೆ ಸಂತಸ ತಂದಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಸಚಿವ ಜೋಶಿಯವರು ಅಲ್ಲಿಂದಲೇ
ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಧರ್ಮ ಸಂರಕ್ಷಣೆ ಜೊತೆಗೆ ಶಿಕ್ಷಣ, ಆರೋಗ್ಯ ಕ್ಷೇತ್ರ ಸೇರಿದಂತೆ ಸಮಾಜ ನಿಷ್ಠರಾಗಿ ಅದ್ವಿತೀಯ ಸೇವೆ ಸಲ್ಲಿಸುತ್ತಿರುವ ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ಸದಸ್ಯರಾಗಿ ನೇಮಕಗೊಂಡಿರುವುದು ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು ಜೋಶಿಯವರು ಹೇಳಿದ್ದಾರೆ. ವೀರೇಂದ್ರ ಹೆಗ್ಗಡೆಯವರ ದೂರದರ್ಶಿತ್ವ ಸಮಾಜಸೇವಾ ಕಾರ್ಯಗಳಿಂದ, ಗ್ರಾಮೀಣ ಜನತೆಯ ಅದರಲ್ಲಿಯೂ ವಿಶೇಷವಾಗಿ ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಬಲೀಕರಣ ಕಾರ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದೆ. ನೇಮಕಕ್ಕೆ ಕಾರಣರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಅಭಿನಂದನೆಗಳು ಎಂದು ಜೋಶಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Check Also
25 ರಂದು ಗಂಗಾ ಸೊಸೈಟಿ ರಜತ ಮಹೋತ್ಸವ
Spread the loveಹುಬ್ಬಳ್ಳಿ: ಇಲ್ಲಿನ ಹಳೇ ಕೋರ್ಟ್ ಸರ್ಕಲ್ ರಸ್ತೆಯ ರೇವಣಕರ ಕಾಂಪ್ಲೆಕ್ಸ್‌ನಲ್ಲಿರುವ ಗಂಗಾ ಕೋ-ಆಪ್ ಕ್ರೆಡಿಟ್ ಸೊಸೈಟಿಯ ರಜತ …