ಜಪಾನ್: ಜಪಾನಿನ ಪಶ್ಚಿಮ ಭಾಗದ ನಗರ ನಾರಾ ಎಂಬಲ್ಲಿ ಮಾಜಿ ಪ್ರಧಾನಿ ಶಿಂಜೋ ಅಬೆ ಮೈಮೇಲೆ ಗುಂಡಿನ ದಾಳಿ ನಡೆದಿದೆ. ಭಾಷಣ ಮಾಡುತ್ತಿದ್ದಾಗ ದಿಢೀರ್ ಕುಸಿದು ಬಿದ್ದ ಅವರ ದೇಹದಿಂದ ತೀವ್ರ ರಕ್ತಸ್ರಾವವಾಗಿದೆ. ಇದೀಗ ಅಬೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯೊಬ್ಬನನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.
1982ರಲ್ಲಿ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಸೇರಿದ ಅಬೆ, ಮೊದಲಿಗೆ ವಿದೇಶಾಂಗ ಇಲಾಖೆ ನಂತರ ಪಕ್ಷದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯಾಗಿ 9 ಸೇವೆ ಸಲ್ಲಿಸಿದ್ದಾರೆ. ಜುಲೈ 2006ರಲ್ಲಿ ತಮ್ಮ 52 ನೇ ವರ್ಷದಲ್ಲಿ ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ಅತಿ ಕಿರಿಯ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.
Check Also
ಎಸ್. ಜೆ. ಎಮ್. ವಿ.ಮಹಾಂತ ಪ್ರಥಮ ದರ್ಜೆ ಕಲಾ, ವಾಣಿಜ್ಯ ಕಾಲೇಜಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ
Spread the loveಎಸ್. ಜೆ. ಎಮ್. ವಿ.ಮಹಾಂತ ಪ್ರಥಮ ದರ್ಜೆ ಕಲಾ, ವಾಣಿಜ್ಯ ಕಾಲೇಜಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ …