Breaking News

ದ್ವಿತೀಯ ಪಿಯುಸಿ ಪ್ರವೇಶ ದಾಖಲಾತಿಗೆ ದಿನಾಂಕ ವಿಸ್ತರಣೆ

Spread the love

ಬೆಂಗಳೂರು: ದ್ವಿತೀಯ ಪಿಯುಸಿ ತರಗತಿಗೆ ಪ್ರವೇಶ ಪಡೆಯುವ ದಾಖಲಾತಿ ದಿನಾಂಕವನ್ನು ವಿಸ್ತರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ವಿಶೇಷ ದಂಡ ಶುಲ್ಕದೊಂದಿಗೆ ಸೆಕೆಂಡ್​ ಪಿಯುಸಿ ತರಗತಿಗತಿಗೆ ಪ್ರವೇಶ ಪಡೆಯುವ ದಾಖಲಾತಿ ದಿನಾಂಕವನ್ನು ಜುಲೈ 22ವರೆಗೆ ವಿಸ್ತರಿಸಿದೆ.
2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಗೆ ಸಂಬಂಧಿಸಿದಂತೆ ದಾಖಲಾತಿ ದಿನಾಂಕವನ್ನು ವಿಶೇಷ ದಂಡ ಶುಲ್ಕದೊಂದಿಗೆ ಜುಲೈ 8 ರವರೆಗೆ ನಿಗದಿಪಡಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಅನಾನುಕೂಲತೆಯನ್ನು ಮನಗಂಡ ಪದವಿ ಪೂರ್ವ ಶಿಕ್ಷಣ ಇಲಾಖೆಯು ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಮತ್ತೆ ಜುಲೈ 22ರವರೆಗೆ ವಿಶೇಷ ದಂಡಶುಲ್ಕದೊಂದಿಗೆ ವಿಸ್ತರಿಸಿ ಸುತ್ತೋಲೆಯನ್ನು ಹೊರಡಿಸಿದೆ.ವಾರ್ಷಿಕವಾಗಿ ಕನಿಷ್ಠ 75 % ಹಾಜರಾತಿಯ ಅವಶ್ಯಕತೆ ಇರುವುದರಿಂದ ಈ ದಿನಾಂಕವನ್ನು ಮುಂದೆ ಯಾವುದೇ ಕಾರಣಕ್ಕೂ ವಿಸ್ತರಿಸಲಾಗುವುದಿಲ್ಲ. ಇದು ಕೊನೆಯ ಅವಕಾಶವಾಗಿದೆ ಎಂದು ಪಿಯು ಬೋರ್ಡ್ ಸ್ಪಷ್ಟಪಡಿಸಿದೆ.


Spread the love

About Karnataka Junction

[ajax_load_more]

Check Also

ವಿಧಾನ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ನಿಧನ

Spread the loveಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ , ವಕೀಲರು ಹಾಗೂ …

Leave a Reply

error: Content is protected !!