ಹುಬ್ಬಳ್ಳಿ : ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಗುರು ಇನ್ಸ್ಟಿಟ್ಯೂಟ್ ಹುಬ್ಬಳ್ಳಿ ವತಿಯಿಂದ ಹುಬ್ಬಳ್ಳಿ-ಧಾರವಾಡ ನಾಟಕ ಸ್ಪರ್ಧೆ ಕಾರ್ಯಕ್ರಮವನ್ನು ಅಗಷ್ಟ ೧ ರಿಂದ ನಗರದ ಗೋಕುಲ್ ರಸ್ತೆಯ ಲೋಹಿಯಾನಗರದ ಆದಿ ರಂಗ ಥೇಟರ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗುರು ಇನಸ್ಟಿಟ್ಯೂಟ್ ನ ಅಧ್ಯಕ್ಷ ಹಾಗೂ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಅವರ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆಯ ಕರೆ ಮೇರೆಗೆ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಆಶಯದಂತೆ ಈ ಸ್ಪರ್ಧೆಯು ಪ್ರತಿಭಾ ವೇದಿಕೆಗೆ ಇದೊಂದು ಸೂಕ್ತ ವೇದಿಕೆಯಾಗಿದ್ದು, ಒಂದು ಲಕ್ಷ ರೂಪಾಯಿ ಬಹುಮಾನ ಗೆಲ್ಲುವ ಅವಕಾಶ ಪಡೆದುಕೊಳ್ಳಬಹುದು ಎಂದರು.
ದೇಶಪ್ರೇಮ ಸಾರುವ, ದೇಶಕ್ಕಾಗಿ ಹೋರಾಡಿದ ವೀರರ ಜೀವನಗಾಥೆ ಹೇಳುವ ವಿಷಯಾಧಾರಿತ ೪೫ ನಿಮಿಷ ಮೀರದ ನಾಟಕಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಧಾರವಾಡದ ಜಿಲ್ಲೆಯ ಯಾವುದೇ ಶಾಲಾ, ಕಾಲೇಜು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಶಾಲೆ ಮತ್ತು ಕಾಲೇಜುಗಳಲ್ಲಿ ಬೇರೆ ಬೇರೆ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದರು.
ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ ಗುರು ಸಂಸ್ಥೆಯ ಆಯೋಜನೆಯಾಗಿದ್ದು, ಶಾಲೆ, ಕಾಲೇಜು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಎಂದರು
ಹೆಚ್ಚಿನ ಮಾಹಿತಿಗಾಗಿ ದೂ. ೯೪೪೮೬೪೦೬೧೫ ಗರ ಸಂಪರ್ಕಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ರವಿ ಕುಲಕರ್ಣಿ ಉಪಸ್ಥಿತರಿದ್ದರು.
