ಹುಬ್ಬಳ್ಳಿ : ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರುತ್ತಿರುವುದನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ರಾಜ್ಯ ಸರ್ಕಾರದ ವಿರುದ್ಧ ಹಿಂದೂಸ್ಥಾನ ಜನತಾ ಪಾರ್ಟಿ ವತಿಯಿಂದ ಹುಬ್ಬಳ್ಳಿಯ ಮಿನಿ ವಿಧಾನಸೌಧ ಆವರಣದಲ್ಲಿಂದು ಪ್ರತಿಭಟನೆ ನಡೆಸಿದರು.
ಜನ ಸಾಮಾನ್ಯರ ಹಿತ ಗಮನದಲ್ಲಿಟ್ಟುಕೊಂಡು ಬೆಲೆ ಏರಿಕೆ ನಿಯಂತ್ರಿಸಬೇಕೆಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಹು-ಧಾ ಯುವ ಮೋರ್ಚಾ ಅಧ್ಯಯನ ಸಿದ್ದು ರಾಯನಾಳ, ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಜೀವನ ಮಾಡುವುದು ಕಷ್ಟವಾಗಿದೆ. ಬೆಲೆ ಏರಿಕೆಯನ್ನು ಶೀಘ್ರ ಇಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ್, ಅರ್ಜುನ ಪವಾರ್, ವಿಜಯ ಮಾಮರಡಿ, ಅಮೃತ ನಿರಂಜನ, ಸಂತೋಷ ಮೆಹರವಾಡೆ, ಮಂಜುನಾಥ ಸೇರಿದಂತೆ ಉಪಸ್ಥಿತರಿದ್ದರು.
