ಧ್ವಜ ಸಂಹಿತೆ ತಿದ್ದುಪಡಿಯಿಂದ ದೇಶಕ್ಕೆ ಅನ್ಯಾಯ: ಬಿ.ಕೆ.ಹರಿಪ್ರಸಾದ*

Spread the love

ಹುಬ್ಬಳ್ಳಿ: ಧ್ವಜ ಸಂಹಿತೆ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದಲ್ಲಿ ಅನ್ಯಾಯ ಮಾಡುತ್ತಿದೆ. ಖಾದಿಯಿಂದ ತಯಾರಿಸಬೇಕಾದ ಧ್ವಜವನ್ನು ಪಾಲಿಸ್ಟರ್ ಬಟ್ಟೆಯಲ್ಲೂ ತಯಾರಿಸಲು ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ರಾಷ್ಟ್ರ ಧ್ವಜ ಸಂಹಿತೆ ತಿದ್ದುಪಡಿಯಿಂದ ಕೋಟ್ಯಂತರ ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ವಿಧಾನ‌ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.

ನಗರದಲ್ಲಿಂದು ಬೆಂಗೇರಿ ಖಾದಿ ಗ್ರಾಮೋದ್ಯೋಗ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಬಳಿಕ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಧ್ವಜ ಸಂಹಿತೆ ತಿದ್ದುಪಡಿಯಿಂದ ಕೇಂದ್ರ ಸರ್ಕಾರ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಸ್ವತಂತ್ರ ಹೋರಾಟಗಾರರಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದೆ. ಇದು ದೇಶಕ್ಕೆ ಗೌರವ ಕೊಡುವ ಕೆಲಸವಲ್ಲ ಎಂದರು.

ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗದಲ್ಲಿ ಅನೇಕ‌ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ರೆ ಈ ತಿದ್ದುಪಡಿ ಮಾಡುವ ಮೂಲಕ ಉದ್ಯೋಗದಲ್ಲಿ ಇರುವವರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿದ್ದಾರೆ. ಕೂಡಲೇ ಈ ಧ್ವಜ ಸಂಹಿತೆ ತಿದ್ದುಪಡಿಯನ್ನ ಸರ್ಕಾರ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.

ಪಾಲಿಸ್ಟರ್ ಬಟ್ಟೆಯಲ್ಲಿ ಧ್ವಜ ತಯಾರು ಮಾಡುವುದು ಸರಿಯಲ್ಲ. ರಾಷ್ಟ್ರ ಧ್ವಜ ಖಾದಿ ಬಟ್ಟೆಯಿಂದಲೇ ತಯಾರಾಗಬೇಕು. ಧ್ವಜ ಸಂಹಿತೆ ತಿದ್ದುಪಡಿ ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.


Spread the love

About gcsteam

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply