ಬೆಂಗಳೂರು: ಸರ್ಕಾರ ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ರಾಜೇಂದ್ರ ಕೆ. ಅವರನ್ನು ಸಹಕಾರಿ ಸಂಘದ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಸುಂದರೇಶ್ ಬಾಬುರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿ.ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.
ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ಕೆಪಿಎಸ್ಸಿಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಶಿವಾನಂದ ಕಾಪಾಶೆ ಅವರನ್ನು ದಾವಣಗೆರೆ ಡಿಸಿಯಾಗಿ ವರ್ಗಾಯಿಸಲಾಗಿದೆ. ಹೊನ್ನಮ್ಮರನ್ನು ಗದಗ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಆರ್. ಲತಾರನ್ನು ಬೆಂಗಳೂರು ಗ್ರಾಮಾಂತರ ಡಿಸಿಯಾಗಿ ಟ್ರಾನ್ಸಫರ್ ಮಾಡಲಾಗಿದ್ದರೆ, ಲೋಖಂಡೇ ಸ್ನೇಹಲ್ ಸುಧಾಕರ್ರನ್ನು ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
Check Also
ದಸರಾ ಹಬ್ಬದ ರಜೆ ಕೊಡದ ಕ್ರಿಶ್ಚಿಯನ್ ಶಾಲೆಗಳು: ಮುತಾಲಿಕ್ ಆಕ್ರೋಶ
Spread the loveನಾಡ ಹಬ್ಬ ದಸರಾಕ್ಕೆ ಸರ್ಕಾರವೇ 15 ದಿನಗಳ ಕಾಲ ಶಾಲೆಗೆ ಅಧಿಕೃತ ರಜೆ ಘೋಷಣೆ ಮಾಡಿದೆ. ಆದರೆ, …