ಹುಬ್ಬಳ್ಳಿ; ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ್ಯ ಹಾಲಪ್ಪನವರ ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳು ತಾಂಡವಾಡುತಿದ್ದು ಸರಿಯಾಗಿ ಆಲಿಸುತಿಲ್ಲ. ಸರಿಯಾಗಿ ಕ್ಷೇತ್ರಕ್ಕೆ ಬರತಾ ಇಲ್ಲ ಆಕ್ರೋಶ ಗೊಂಡ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ನೆಲಕ್ಕೆ ಕುಳಿತುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಹಾಲಪ್ಪ ಆಚಾರ್ಯ ಅವರು ಧಾರವಾಡ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡ ನಂತರ ಸರಿಯಾಗಿ ಕ್ಷೇತ್ರಕ್ಕೆ ಬರುತಿಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ದೀಪ ಸರಿಯಾಗಿಲ್ಲ. ಬೇಕಾಬಿಟ್ಟಿ ಕಾಮಗಾರಿ ಮಾಡಲಾಗುತ್ತದೆ. ಇನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಸಹ ಅನೇಕ ಸಮಸ್ಯೆಗಳಿವೆ ಈ ಬಗ್ಗೆ ಗಮನ ಹರಿಸುತಿಲ್ಲ. ಇನ್ನ ಅನೇಕ ಕಟ್ಟಡ ಕಾಮಗಾರಿ ಹಾಗೂ ನೆರೆ ಸಂತ್ರಸ್ತರ ಪರಿಹಾರ ನೀಡುವಲ್ಲಿ ವಿಳಂಬ ಜೊತೆಗೆ ಭ್ರಷ್ಟಾಚಾರ ತಾಂಡವಾಡುತ್ತಿವೆ. ಸ್ಮಾರ್ಟ್ ಸಿಟಿ ಅವೈಜ್ಞಾನಿಕವಾಗಿದ್ದು ಬಿಆರ್ ಟಿಎಸ್ ಕಳಪೆಯಾಗಿದ್ದು ಕಾಮಗಾರಿ ಈ ಕುರಿತು ಯಾರಿಗೆ ಹೇಳಬೇಕು. ನಮ್ಮ ಸಮಸ್ಯೆ ಕೇಳುವವರು ಯಾರು ಇಲ್ಲಾ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಪ್ರತಿಭಟನಾಕಾರ ಕುಳಿತುಕೊಂಡು ಪ್ರತಿಭಟನೆ ಮಾಡದಂತೆ ಮನವೊಲಿಸಲು ಪ್ರಯತ್ನ ಮಾಡಿದರು.ಆದರೆ ಇದಕ್ಕೆ ಕ್ಯಾರೇ ಅನ್ನದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಸಹ ನಡೆಯಿತು.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …