ಹುಬ್ಬಳ್ಳಿ: ಭಾರೀ ಮಳೆ ಮತ್ತು ಪ್ರವಾಹದಿಂದ ಸಂಕಷ್ಟಕ್ಕೆ ಈಡಾದ ಜನರಿಗೆ ಪರಿಹಾರ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,
ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ಪ್ರದೇಶಗಳಿಗೆ ಈಗಾಗಲೇ ತೆರಳಿ ಪರಿಹಾರ ನೀಡಲು ವೀಕ್ಷಣೆ ಮಾಡಿದ್ದು ಪರಿಹಾರ ಸಹ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು..
ಮೂಲ ಸೌಕರ್ಯಕ್ಕಾಗಿ 500 ಕೋಟಿ ಒದಗಿಸಿದ್ದೇನೆ. ಮನೆಗಳನ್ನು ಕಟ್ಟಲು ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬೆಳೆ ಪರಿಹಾರಕ್ಕಿಂತ ಹೆಚ್ಚು ಮಾಡಿದ್ದೇವೆ. ಪ್ರವಾಹದ ಸಂದರ್ಭದಲ್ಲಿ ಯಾರು ತೊಂದರೆಗೀಡಾಗಿದ್ದಾರೆ, ಅವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಲಿದೆ. ಆಮೇಲೆ ಸೂಕ್ತವಾದ ಪರಿಹಾರವನ್ನೂ ನಮ್ಮ ಸರ್ಕಾರ ನೀಡಲಿದೆ ಎಂದರು
ಸರ್ಕಾರ ಒಂದು ವರ್ಷ ಪೂರೈಸಿದ್ದಕ್ಕೆ ದೊಡ್ಡ ಬಳ್ಳಾಪುರದಲ್ಲಿ ದೊಡ್ಡ ರ‍್ಯಾಲಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಇದೇ ವೇಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅನೇಕ ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಬಗ್ಗೆ ಚರ್ಚಿಸಲಾಗಿದೆ ಎಂದರು.ಸಭೆ ನಡುವೆ ನಿನ್ನೆ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಾತಾಡಿದ್ದೇನೆ. ಅಲ್ಲಿನ ಸ್ಥಳೀಯ ನದಿಗಳ ಪ್ರವಾಹ, ಜನರ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ. ಆಶ್ರಯ ಕೇಂದ್ರಗಳನ್ನು ಕೂಡಲೇ ತೆರೆಯಬೇಕು, ಮನೆಗಳು ಬಿದ್ದಲ್ಲಿ ಪರಿಹಾರ ಕೊಡುವಂತೆ ಸೂಚಿಸಿದ್ದು, ಈಗಾಗಲೇ ಹಣ ಒದಗಿಸಲಾಗಿದೆ ಎಂದು ತಿಳಿಸಿದರು.
