Breaking News

ಅಶಾಂತಿ ವಾತಾವರಣದಿಂದ ಮನಸ್ಸಿಗೆ ನೋವು, ನನ್ನಿಂದ ಸಿದ್ದರಾಮಯ್ಯಾನವರಿಗೆ ನೋವಾಗಿದ್ದರೆ ಕ್ಷಮೆ ಇರಲಿ- ರಜಿಯಾ ಕಲಾದಗಿ

Spread the love

ಬಾಗಲಕೋಟೆ : ಕೆಲವರು ಸೃಷ್ಟಿ ಮಾಡಿದ ಅಶಾಂತಿಯ ವಾತಾವರಣದಿಂದ ಕೆರೂರಿನಲ್ಲಿ ಉದ್ರಿಕ್ರ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತಪ್ಪು ಮಾಡದಿದ್ದರೂ ಅಮಾಯಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ನಮ್ಮ ಮನಸ್ಸಿಗೆ ಭಾರಿ ನೋವಾಗಿತ್ತು. ಈ ನೋವಿನಲ್ಲಿ ಸಿದ್ದರಾಮಯ್ಯ ಅವರ ಮಂದೆ ಅನುಚಿತವಾಗಿ ನಡೆದುಕೊಳ್ಳಬೇಕಾಯಿತು. ಇದಕ್ಕಾಗಿ ನಾವು ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ. ಸಿದ್ದರಾಮಯ್ಯ ಅವರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ.
ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿಸುವ ಯಾವುದೇ ಉದ್ದೇಶ ನಮ್ಮದಾಗಿರಲಿಲ್ಲ. ಅವರಿಗೆ ಅವಮಾನ ಮಾಡುವ ಉದ್ದೇಶವೂ ಎಳ್ಳಷ್ಟು ನಮ್ಮಲ್ಲಿ ಇರಲಿಲ್ಲ. ನಡೆದಿರುವ ಘಟನೆಗಳ ಹಿನ್ನೆಲೆಯಲ್ಲಿ ನಮ್ಮ ಮನಸ್ಸಿಗೆ ತೀವ್ರ ಘಾಸಿಯಗಿದೆ. ಸಿದ್ದರಾಮಯ್ಯ ಅವರು ಹಣ ನೀಡುವುದಕ್ಕಿಂತ ಅವರು ನಮಗೆ ನ್ಯಾಯ ಒದಗಿಸಿಕೊಡಬೇಕು ಎಂಬುದೇ ನಮ್ಮ ಕಳಕಳಿಯ ಮನವಿ. ಸಿದ್ದರಾಮಯ್ಯ ಅವರು ನಮ್ಮ ಸಮುದಾಯದ ನಾಯಕರು. ಸದಾ ನಮ್ಮ ಸಮುದಾಯದ ಪರ ನಿಲ್ಲುವ ರಾಜಕಾರಣಿ ಅವರು. ಈ ರೀತಿ ಇರುವಾಗ ಅವರಿಗೆ ಅವಮಾನ ಮಾಡುವ ಮಟ್ಟಕ್ಕೆ ನಾವು‌ ಹೋಗುವುದಿಲ್ಲ.
ಆಕಸ್ಮಿಕವಾಗಿ ನಡೆದಿರುವ ಘಟನೆ ಇದಾಗಿಯೇ ಹೊರತು ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿಸುವ ಉದ್ದೇಶ ನಮ್ಮದಾಗಿರಲಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇವೆ.


Spread the love

About Karnataka Junction

    Check Also

    ನೇಹಾ ಕೊಲೆ‌ ಪ್ರಕಾರಣ: ಕೊಲೆ ಆರೋಪಿ ಫಯಾಜ್ ಕೊಲೆಯಾದ ಸ್ಥಳಕ್ಕೆ ಮಹಜರು

    Spread the loveಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ …

    Leave a Reply

    error: Content is protected !!