ಹುಬ್ಬಳ್ಳಿ;
ನಿ. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬಿಎಸ್ ಪಿ ಮುಖಂಡ ವಿಜಯ ಕರ್ರಾ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರದ ಗೋಕುಲ ರಸ್ತೆಯ ಖಾಸಗಿ ಹೊಟೇಲ್ ನಲ್ಲಿ ಭೇಟಿಯಾಗಿ
ಸದಾಶಿವ ಆಯೋಗದ ವರದಿ ಜಾರಿಗೆ ಮುಂದಾಗಲು ಒತ್ತಾಯ ಮಾಡಲಾಯಿತು.
ಸಾಕಷ್ಟು ವರ್ಷಗಳಿಂದ ಈ ವರದಿ ಜಾರಿಗೆ ಆಗ್ರಹಿಸಿ ನಾವು ಹೋರಾಟ ಮಾಡುತ್ತಲೆ ಬಂದಿದ್ದು ಕೂಡಲೇ ರಾಜ್ಯ ಸರ್ಕಾರ ಈ ವಿಷಯದಲ್ಲಿ ಆಶಕ್ತಿ ವಹಿಸಬೇಕು.
ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಛಲವಾದಿ ಮತ್ತು ಮಾದಿಗರು ಆದಿಕರ್ನಾಟಕ, ಆದಿದ್ರಾವಿಡ ಎಂದು ಜಾತಿ ದೃಢೀಕರಣ ಮಾದಿಗರಿಗೆ ಸರ್ಕಾರಿ ಸೌಲಭ್ಯ ಪಡೆಯಲು ಗೊಂದಲವಾಗಿ ತೊಂದರೆಯಾಗುತ್ತಿದೆ. ಆದ ಕಾರಣ ಕಂದಾಯ ಇಲಾಖೆಯಿಂದ ಜಾತಿ ದೃಢೀಕರಣ ಪತ್ರದಲ್ಲಿ ಆದಿಕರ್ನಾಟಕ ಜೊತೆಗೆ (ಮಾದಿಗ) ಎಂದು ಜಾತಿ ದೃಢೀಕರಣ ಪತ್ರ ನೀಡುವಂತೆ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
