Breaking News

ಸ್ಮಾರ್ಟ್ ಸಿಟಿಯ ಸ್ಮಾರ್ಟ್ ಬ್ರಹ್ಮಾಂಡ ಭ್ರಷ್ಟಾಚಾರ: ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ದೂರು

Spread the love

ಹುಬ್ಬಳ್ಳಿ: ಅದು ವಾಣಿಜ್ಯ ನಗರಿ, ಛೋಟಾ ಮುಂಬೈ , ಐಐಟಿ, ಐಐಐಟಿ , ಬಿಆರ್ ಟಿಎಸ್ ಎಂಬ ಹೆಗ್ಗಳಿಕೆ ಜೊತೆಗೆ ಸ್ಮಾರ್ಟ್ ಸಿಟಿ ಯೋಜನೆ. ಆದರೆ ಹುಬ್ಬಳ್ಳಿ ಧಾರವಾಡ ಅವಳಿನಗರದ ಮಹತ್ವಪೂರ್ಣ ಯೋಜನೆಯಲ್ಲಿ ಒಂದು. ಇದರಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವೇ ನಡೆದು ಹೋಗಿದೆ.
ಆದರೆ ಈ ಯೋಜನೆಯಲ್ಲಿ ದೊಡ್ಡಮಟ್ಟದ ಅವ್ಯವಹಾರವೇ ಸೃಷ್ಟಿಯಾಗಿದೆ. ಈಗ ತನಿಖೆಗೆ ಲೋಕಾಯುಕ್ತಕ್ಕೆ ದೂರು ನೀಡದ್ದ ಹೋರಾಟಗಾರರು ಈಗ ಮುಂದುವರಿದ ಭಾಗವಾಗಿ ಮತ್ತೊಂದು ದೂರು ದಾಖಲು ಮಾಡಿದ್ದಾರೆ.
ಹೌದು.. ಒಂದು ಉದ್ಯಾನವನ್ನು ಆರಂಭಿಕ ಹಂತದಲ್ಲಿಯೇ ನಿರ್ಮಾಣ ಮಾಡಿ ಅಭಿವೃದ್ಧಿ ಮಾಡಲು ಸಿಂಗಲ್ ಡಿಜಿಟ್ ನಲ್ಲಿರುವ ಕೋಟಿ ಅನುದಾನ ಸಾಕು. ಆದರೆ ಹಳೇಯ ಮಣ್ಣಿನ ಗೋಡೆಗೆ ಬಣ್ಣ ಬಳೆದು ಸುಮಾರು 26.11 ಕೋಟಿ ಸಾರ್ವಜನಿಕ ಹಣವನ್ನು ಪೋಲು ಮಾಡಿರುವುದು ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಹೌದು…ಈ ಹಿಂದೆಯಷ್ಟೆ ನಿಮ್ಮ ಮಹಾತ್ಮ ಗಾಂಧಿ ಉದ್ಯಾನವನ ಹಾಗೂ ಇಂದಿರಾ ಗಾಜಿನ ಮನೆ ಆವರಣದಲ್ಲಿ ನಿರ್ಮಾಣ ಗೊಂಡಿರುವ ಬಗ್ಗೆ ವಿಶೇಷ ವರದಿಯೊಂದನ್ನು ಮಾಡಿತ್ತು. ಈ ಕುರಿತು ಸಾರ್ವಜನಿಕರು ಈ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಹಣವನ್ನು ಲೂಟಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ಮಾಡುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈಗ ಮುಂದುವರಿದ ಭಾಗವಾಗಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕರ ಮೇಲೆಯೇ ತನಿಖೆಗೆ ಆಗ್ರಹಿಸಿ ದೂರು ಸಲ್ಲಿಸಿದ್ದಾರೆ.ನ್ನೂಇ ಇರುವ ಗೋಡೆಗಳಿಗೆ ಸುಣ್ಣ ಬಣ್ಣ ಬಳೆದಿದ್ದು, ಮೊದಲು ಇದ್ದ ಕಾರಂಜಿಗೆ ಸ್ವಲ್ಪ ಪ್ರಮಾಣದ ಅಧುನಿಕರಣಗೊಳಿಸಿದ್ದಾರೆ. ಅಲ್ಲದೇ ಫುಟ್ ಪಾಥ್ ಗಳಿಗೂ ಬಣ್ಣ ಬಳೆದು ಜನರಿಗೆ ಹಗಲಿನಲ್ಲಿಯೇ ನಕ್ಷತ್ರಗಳನ್ನು ತೋರಿಸುವ ರೀತಿಯಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಜನರ ದುಡ್ಡಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದು, ಸ್ಮಾರ್ಟ್ ಸಿಟಿ ವ್ಯವಸ್ಥಾಪಕರ ವಿರುದ್ಧ ಕೂಡ ದೂರನ್ನು ಸಲ್ಲಿಸಿದ್ದಾರೆ. ವ್ಯವಸ್ಥಾಪಕ ನಿರ್ದೇಶಕ ಶಕೀಲ ಅಹ್ಮದ ಅವರೇ ಇದೊಂದು ಅವ್ಯವಸ್ಥೆಗೆ ಕಾರಣ ಎಂದು ಆರೋಪಿಸಿರುವ ಹೋರಾಟಗಾರರು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಸ್ಮಾರ್ಟ್ ಸಿಟಿ ಹೆಸರಲ್ಲಿ ಜನರ ಹಣವನ್ನು ಬೇಕಾಬಿಟ್ಟಿಯಾಗಿ ಪೋಲ್ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ. ಈ ಬ್ರಹ್ಮಾಂಡ ಭ್ರಷ್ಟಾಚಾರದ ಹಿಂದೇ ಯಾವ ಕಾಣದ ಕೈಗಳ ಕೈವಾಡವಿದೆ ಎಂಬುವುದು ಲೋಕಾಯುಕ್ತದ ತನಿಖೆಯ ನಂತರವೇ ಬಯಲಿಗೆ ಬರಬೇಕಿದೆ.


Spread the love

About Karnataka Junction

[ajax_load_more]

Check Also

ವಿಧಾನ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ನಿಧನ

Spread the loveಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ , ವಕೀಲರು ಹಾಗೂ …

Leave a Reply

error: Content is protected !!