Breaking News

ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ

Spread the love

ಹುಬ್ಬಳ್ಳಿ: ರಾಜ್ಯದ ಹಿಂದುಳಿದ ಸಮುದಾಯಗಳಾದ ಈಡಿಗ, ಬಿಲ್ಲವ, ನಾಮಧಾರಿ, ದೀವರ ಹಾಗೂ ಇತರ ಒಳಪಂಗಡಗಳ ಅಭಿವೃದ್ಧಿಗಾಗಿ ಕೂಡಲೇ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ₹500 ಕೋಟಿ ನಿಧಿಯನ್ನು ಮೀಸಲಿಡಬೇಕು’ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
‘ನಮ್ಮ ಸಮುದಾಯದ 26 ಒಳಪಂಗಡಗಳ ಒಟ್ಟು 70 ಲಕ್ಷ ಜನ ರಾಜ್ಯದಲ್ಲಿದ್ದಾರೆ. ಹಲವು ಕ್ಷೇತ್ರಗಳಲ್ಲಿ ನಾವು ನಿರ್ಣಾಯಕ ಸಂಖ್ಯೆಯಲ್ಲಿದ್ದೇವೆ. ಆದರೂ, ನಿಗಮ ಸ್ಥಾಪಿಸುವಂತೆ ನಾವು ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿದೆ. ರಾಜ್ಯ ಸರ್ಕಾರ ಕೂಡಲೇ ನಮ್ಮ ಬೇಡಿಕೆಗೆ ಸ್ಪಂದಿಸಬೇಕು’ ಎಂದು ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಎರಡು ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದೆಲ್ಲ ಕಡೆ 2004ರಲ್ಲಿ ಬಂದ್ ಮಾಡಿದ್ದರಿಂದ ಸಮಾಜದ ಜನ ಕಷ್ಟದಲ್ಲಿದ್ದಾರೆ. ಸದ್ಯ ಮಂಗಳೂರು ಮತ್ತು ಉಡುಪಿಯಲ್ಲಿ ಮಾತ್ರ ಮಾರಾಟಕ್ಕೆ ಅವಕಾಶವಿದೆ. ‍ಪಕ್ಕದ ಗೋವಾ, ತೆಲಂಗಾಣ ಹಾಗೂ ಕೇರಳದಲ್ಲಿ ಸೇಂದಿ ಮಾರಾಟಕ್ಕೆ ಅವಕಾಶ ನೀಡಿರುವಂತೆ ಕರ್ನಾಟಕದಲ್ಲೂ ಎಲ್ಲ ಕಡೆ ಅವಕಾಶ ನೀಡಬೇಕು’ ಎಂದರು‌.
‘ಈಗಾಗಲೇ ಕೆಲ ಸಮುದಾಯಗಳು 2ಎ ಪ್ರವರ್ಗಕ್ಕೆ ತಮ್ಮನ್ನು ಸೇರಿಸುವಂತೆ ಹೋರಾಟ ಮಾಡುತ್ತಿವೆ. ನಮ್ಮ ಸಮುದಾಯವೂ 2ಎ ಪ್ರವರ್ಗದಲ್ಲಿದೆ. ಸರ್ಕಾರವೇನಾದರೂ ಅವರ ಬೇಡಿಕೆಗೆ ಸ್ಪಂದಿಸಿದರೆ ನಮ್ಮ ಮೀಸಲಾತಿಗೆ ತೊಂದರೆಯಾಗಲಿದೆ. ಹೀಗಾಗಿ, ನಮ್ಮನ್ನು ಪ್ರವರ್ಗ 1ಕ್ಕೆ ಸೇರಿಸಬೇಕು. ಈ ಕುರಿತು ಅಧ್ಯಯನಕ್ಕಾಗಿ ಆಂತರಿಕವಾಗಿ ಒಂದು ಸಮಿತಿಯನ್ನು ರಚಿಸಲಾಗಿದೆ’ ಎಂದರು.
‘ಸರ್ಕಾರದಲ್ಲಿ ನಮ್ಮ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲಕುಮಾರ್ ಸೇರಿದಂತೆ ಏಳು ಜನಪ್ರತಿನಿಧಿಗಳಿದ್ದಾರೆ. ಜುಲೈ 30ರೊಳಗಾಗಿ ಮುಖ್ಯಮಂತ್ರಿ ಜೊತೆ ನಮ್ಮ ಬೇಡಿಕೆ ಕುರಿತು ಚರ್ಚಿಸಿ ಈಡೇರಿಸುವ ಭರವಸೆ ನೀಡಿದ್ದಾರೆ. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದರು.


Spread the love

About Karnataka Junction

[ajax_load_more]

Check Also

ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ*

Spread the loveಹುಬ್ಬಳ್ಳಿ : ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಂಗಣದಲ್ಲಿ 2024 ರ ಯುವನಿಧಿ ಯೋಜನೆಯ ನೋಂದಣಿ …

Leave a Reply

error: Content is protected !!