ಬೆಂಗಳೂರು: ಭಾರತೀಯ ಜನತಾ ಪಕ್ಷದ ಹಾಗೂಹಿಂದು ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕೊಲೆ ಪ್ರಕರಣದಲ್ಲಿ ಆರೋಪಿಗಳ ಮೇಲೆ ಕಠೀಣ ಕ್ರಮಕ್ಕೆ ಸರ್ಕಾರ ಮುಂದಾಗದ ವೈಖರಿಸಿ ಖಂಡಿಸಿ ಸ್ವತಃ ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು ರಾಜೀನಾಮೆ ನೀಡಿ ಪಕ್ಷವನ್ನು ಎಚ್ಚರಿಸಲು ಮುಂದಾಗಿದ್ದಾರೆ. ರಾಜ್ಯಾದ್ಯಂತ ಮುಖಂಡರ ರಾಜೀನಾಮೆ ಪರ್ವ ಆರಂಭಗೊಂಡಿದ್ದು ಯಾರು ಯಾರು ರಾಜೀನಾಮೆ ನೀಡಿದ್ದಾರೆ ಎಲ್ಲ ಮಾಹಿತಿ ಇಲ್ಲಿದೆ.
ಮೈಸೂರು: ಮೈಸೂರಿನ ಎನ್.ಆರ್.ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಸೇರಿದಂತೆ ನಾಲ್ವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.ಅಧ್ಯಕ್ಷ ಡಿ.ಲೋಹಿತ್, ಪ್ರಧಾನ ಕಾರ್ಯದರ್ಶಿಗಳಾದ ಧನರಾಜ್, ನವೀನ್ ಶೆಟ್ಟಿ, ಕಾರ್ಯದರ್ಶಿಗಳಾದ ಎಂ.ರಾಜು,ಜಿ.ಅರುಣ್ ಅವರು ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ, ಬೇಸರದಿಂದ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಮೈಸೂರು ಬಿಜೆಪಿ ಮುಖಂಡರಿಂದ ರಾಜೀನಾಮೆ ಪತ್ರಮೈಸೂರು ಬಿಜೆಪಿ ಮುಖಂಡರಿಂದ ರಾಜೀನಾಮೆ ಪತ್ರಪ್ರವೀಣ್ ನೆಟ್ಟಾರು ಕೊಲೆಯಿಂದ ಬಿಜೆಪಿ ಯುವಸಮೂಹಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲದೆ ಹಿಂದೆಲ್ಲ ನಡೆದಂತಹ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೆ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಮೈಸೂರಿನ ಬಿಜೆಪಿ ಕಾರ್ಯಕರ್ತರುಮೈಸೂರಿನ ಬಿಜೆಪಿ ಕಾರ್ಯಕರ್ತರುಕಲಬುರಗಿ: ಹತ್ಯೆ ಖಂಡಿಸಿ ಕಲಬುರಗಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಜಾಗೃತಿ ಸೇನೆ ಸಂಘಟನೆಯ ನೇತೃತ್ವದಲ್ಲಿ ನಗರದ ಎಸ್ವಿಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದರೂ ಸಹ ಹಿಂದೂ ಕಾರ್ಯಕರ್ತರ ಹತ್ಯೆ ತಡೆಯಲು ಸಾಧ್ಯವಾಗುತ್ತಿಲ್ಲ. ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡುವಲ್ಲಿ ವಿಫಲವಾದ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು.
ಬೆಳಗಾವಿ: ಬೆಳಗಾವಿಯಲ್ಲೂ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ಶುರುವಾಗಿದೆ. ಬಿಜೆಪಿ ಅರಭಾವಿ ಮಂಡಲ ಸಾಮಾಜಿಕ ಜಾಲತಾಣ ಸದಸ್ಯ ಸ್ಥಾನಕ್ಕೆ ಅವಿನಾಶ್ ಹಿರೇಮಠ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ರಾಜೀನಾಮೆ ಪತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಂದೆ ಎಲ್ಲಾ ಹಿಂದೂಪರ ಕಾರ್ಯಕರ್ತರ ಹತ್ಯೆಯಾದಾಗ ‘ಕಠಿಣ ಕ್ರಮ’ ಜರುಗಿಸಿದ್ದೀರಿ ಎಂಬುದು ನಮ್ಮ ಕಣ್ಮುಂದೆ ಇದೆ. ‘ಕಠಿಣ ಕ್ರಮ’ ಎನ್ನುವುದು ಭರವಸೆ ಆಗಿಯೇ ಇದೆ ಎಂಬುದಕ್ಕೆ ಈ ರಾಜೀನಾಮೆ ಎಂದು ಉಲ್ಲೇಖ ಮಾಡಿದ್ದಾರೆ. ಗೋಕಾಕದ
ಇನ್ನು ಅರಭಾವಿ ಕ್ಷೇತ್ರದ ಬಿಜೆಪಿ ಸಾಮಾಜಿಕ ಜಾಲತಾಣದ ಸದಸ್ಯ ಸ್ಥಾನಕ್ಕೆ ಅವಿನಾಶ್ ಹಿರೇಮಠ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಈ ಪಕ್ಷಕ್ಕೆ ತನ್ನದೇ ಆದ ಇತಿಹಾಸ ಹಾಗೂ ಸೈದ್ಧಾಂತಿಕ ವಿಚಾರ ಇದೆ. ಇಂಥ ಪಕ್ಷದ ಅನೇಕ ಕಾರ್ಯಕರ್ತರ ಬಲಿದಾನ ನಡೆದಿದ್ದು, ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವ ದುರ್ಗತಿ ಬಂದೊದಗಿದೆ.ಇದರಿಂದ ಬಿಜೆಪಿ ಕಾರ್ಯಕರ್ತರಲ್ಲಿ ನೋವುಂಟಾಗಿದೆ. ಈ ಕುರಿತಂತೆ ಸರ್ಕಾರ ಪ್ರತೀಬಾರಿ ಹಿಂದೂ ಕಾರ್ಯಕರ್ತರ ಕೊಲೆಯಾದಾಗಲೂ ಕೂಡ ಕಠಿಣ ಕ್ರಮ ಜುಗಿಸಿದ್ದೀನಿ ಎಂದು ಹೇಳುತ್ತ ಬಂದಿದ್ದಾರೆ. ಈ ಹೇಳಿಕೆ ಕೇವಲ ಭರವಸೆಯಾಗಿ ಉಳಿದಿರುವ ಕಾರಣ ಅರಭಾವಿ ಮಂಡಲ ಸಾಮಾಜಿಕ ಜಾಲತಾಣದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ಅರಭಾವಿ ಮಂಡಲಾಧ್ಯಕ್ಷ ಮಹಾದೇವ ಅಕ್ಕಿ ಅವರಿಗೆ ಸಲ್ಲಿಸಿದ್ದಾರೆ.
ಪ್ರವೀಣ ಹತ್ಯೆ ಖಂಡಿಸಿ ಬಾಗಲಕೋಟೆ ಜಿಲ್ಲೆಯಲ್ಲಿಯೂ ಕಾರ್ಯಕರ್ತರ ರಾಜೀನಾಮೆ ಪರ್ವ ಮುಂದುವರೆದಿದೆ. ಶಾಸಕ ಸಿದ್ದು ಸವದಿ ಪುತ್ರನಿಂದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿದ್ದು ಸವದಿ ಪುತ್ರ ವಿದ್ಯಾಧರ ಸವದಿ ಅವರು ರಾಜೀನಾಮೆ ನೀಡಿದ್ದಾರೆ. ಇವರು ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲಗೆ ರಾಜೀನಾಮೆ ಪತ್ರ ಬರೆದಿದ್ದು, ಅದನ್ನು ಫೇಸ್ ಬುಕ್ ನಲ್ಲಿ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ದಾವಣಗೆರೆ ಬಿಜೆಪಿ ಮುಖಂಡರುದಾವಣಗೆರೆ ಬಿಜೆಪಿ ಮುಖಂಡರುದಾವಣಗೆರೆ : ದಕ್ಷಿಣ ಕನ್ನಡ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ಕೊಲೆಯಾದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲೂ ಯುವ ಮೋರ್ಚಾ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿ ರಾಜೀನಾಮೆ ಪತ್ರವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿಯವರಿಗೆ ರವಾನಿಸಿದ್ದಾರೆ. ಬಿಜೆಪಿ ಪಕ್ಷದಲ್ಲಿ ಹಿಂದೂ ಕಾರ್ಯಕರ್ತನಿಗೆ ರಕ್ಷಣೆ ಇಲ್ಲ ಎಂದ ಮೇಲೆ ಯುವ ಮೋರ್ಚಾದಲ್ಲಿ ಇದ್ದು ಏನ್ ಪ್ರಯೋಜನ? ಎಂದು ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆರ್ ಎಲ್ ಶಿವಪ್ರಕಾಶ್ ಸೇರಿದ್ದಂತೆ ಜಿಲ್ಲೆಯ ಎಂಟು ಮಂಡಲದ ಅಧ್ಯಕ್ಷರೊಳಗೊಂಡು ಎಲ್ಲಾ ಪದಾಧಿಕಾರಿಗಳು ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ದಾವಣಗೆರೆ ಮುಖಂಡರಿಂದ ರಾಜೀನಾಮೆ ಪತ್ರದಾವಣಗೆರೆ ಮುಖಂಡರಿಂದ ರಾಜೀನಾಮೆ ಪತ್ರಟೈರ್ ಸುಟ್ಟು ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ: ದಾವಣಗೆರೆಯ ಜಯದೇವ ವೃತ್ತದಲ್ಲಿ ಹಾಗೂ ಹೊನ್ನಾಳಿ ಸಂಗೊಳಿ ರಾಯಣ್ಣ ವೃತ್ತದಲ್ಲಿ ಟೈಯರ್ಗೆ ಬೆಂಕಿ ಹಾಕಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರವೀಣ್ ಹತ್ಯೆ ಖಂಡಿಸಿದರು.
ಕೊಪ್ಪಳ ಜಿಲ್ಲೆಯ
ಗಂಗಾವತಿ ಬಿಜೆಪಿ ನಗರ ಯುವ ಘಟಕದ ಅಧ್ಯಕ್ಷ ಸೇರಿದಂತೆ ಇತರೆ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಗಂಗಾವತಿ ನಗರ ಘಟಕದ ಯುವ ಮೋರ್ಚಾ ಅಧ್ಯಕ್ಷ ಕೆ. ವೆಂಟಕೇಶ ಚಿಕ್ಕಜಂತಕಲ್, ಪ್ರವೀಣ ನೆಟ್ಟಾರ ಅವರ ಹತ್ಯೆ ಖಂಡಿಸಿ ತಮ್ಮ ರಾಜೀನಾಮೆಯನ್ನು ನಗರ ಘಟಕದ ಅಧ್ಯಕ್ಷ ಕಾಶಿನಾಥ ಚಿತ್ರಗಾರ ಅವರಿಗೆ ರವಾನಿಸಿದ್ದಾರೆ.ಗಂಗಾವತಿ ಬಿಜೆಪಿ ಮುಖಂಡಗಂಗಾವತಿ ಬಿಜೆಪಿ ಮುಖಂಡಪಕ್ಷ ಅಧಿಕಾರದಲ್ಲಿದ್ದರೂ ನಮಗೆ ರಕ್ಷಣೆ ಇಲ್ಲವಾಗಿದ್ದು, ಕೊಲೆಗಡುಕರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ಕೇವಲ ಭರವಸೆಯಾಗಿಯೇ ಉಳಿದಿದೆ. ಹೀಗಾಗಿ ಪ್ರವೀಣ್ ಹತ್ಯೆ ಖಂಡಿಸಿ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದೇವೆ ಎಂದು ವೆಂಕಟೇಶಾ್್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …