ಹುಬ್ಬಳ್ಳಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ ರೋಣ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ವಿಶೇಷವಾಗಿ ಸ್ವಾಗತ ಮಾಡುವ ಮೂಲಕ ಚಿತ್ರಕ್ಕೆ ಶುಭಾಶಯ ಕೋರಿದರು.
ಹೌದು.. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಅಪ್ಸರಾ ಚಿತ್ರಮಂದಿರದಲ್ಲಿ ಬೆಳ್ಳಂಬೆಳಿಗ್ಗೆ ಆಗಮಿಸಿದ ಕಿಚ್ಚನ ಅಭಿಮಾನಿಗಳು ಸುದೀಪ್ ಬ್ಯಾನರ್ ಗೆ ಕ್ಷೀರಾಭೀಷೇಕ ಮಾಡುವ ಮೂಲಕ ಹಾಗೂ ಪಟಾಕಿ ಸಿಡಿಸಿ ಸಂಭ್ರಮಿಸುವ ಮೂಲಕ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಹಾಗಿದ್ದರೇ ಇಲ್ಲಿದೆ ನೋಡಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಿಚ್ಚನ ಅಭಿಮಾನಿಗಳ ಅಭಿಮಾನದ ಕಿಚ್ಚು.
ಇನ್ನೂ ಸುಮಾರು ದಿನಗಳಿಂದ ಸಾಕಷ್ಟು ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸುದೀಪ್ ಅಭಿನಯದ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಅಭಿಮಾನಿಗಳು ತಂಡೋಪ ತಂಡವಾಗಿ ಆಗಮಿಸುವ ಮೂಲಕ ಮೊದಲ ದಿನದ ಮೊದಲ ಶೋ ನೋಡುವ ಮೂಲಕ ಚಿತ್ರಕ್ಕೆ ಬೆಂಬಲ ಸೂಚಿಸಿದ್ದಾರೆ.
ಒಟ್ಟಿನಲ್ಲಿ ಕಿಚ್ಚನ ಅಭಿಮಾನಿಗಳ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿದ್ದು, ಚಿತ್ರ ಯಶಸ್ವಿಯಾಗಿ ಪ್ರದರ್ಶನವಾಗಲಿ ಎಂಬುವುದು ನಮ್ಮ ಆಶಯ.
Check Also
ಮಹದಾಯಿಗಾಗಿ ಚಿತ್ರರಂಗ ಒಕ್ಕಟ್ಟಾಗಿ ಹೋರಾಟ ಮಾಡುತ್ತದೆ- ನಟ ಶಿವರಾಜ್ ಕುಮಾರ್
Spread the loveಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ …