ಮಂಗಳೂರು: ಮಂಗಳೂರಿನ ಸುರತ್ಕಲ್ನಲ್ಲಿ ಗುರುವಾರ ಸಂಜೆ ನಡೆದ ಯುವಕನ ಹತ್ಯೆ ಪ್ರಕರಣದ ಸಂಬಂಧ 21 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್ನ ಅಂಗಡಿಯೊಂದರ ಮುಂದೆ ನಿಂತಿದ್ದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬಾತನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಲ್ಲಿ ಮೂವರು ಆರೋಪಿಗಳು ಫಾಜಿಲ್ ಮೇಲೆ ದಾಳಿ ಮಾಡಿರುವುದು ಕಂಡುಬಂದಿತ್ತು. ದುಷ್ಕರ್ಮಿಗಳು ಕಾರಿನಲ್ಲಿ ಬಂದಿರುವುದರಿಂದ ಕಾರನ್ನು ಪತ್ತೆ ಹಚ್ಚಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ
ಈ ಪ್ರಕರಣದಲ್ಲಿ ಇದುವರೆಗೆ 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರೆಲ್ಲರನ್ನು ಶಂಕೆಯ ಆಧಾರದಲ್ಲಿ ವಶಕ್ಕೆ ಪಡೆದು ವಿಚಾರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Check Also
ಎಪಿಎಂಸಿಗೆ ಶಾಸಕ ಟೆಂಗಿನಕಾಯಿ ಭೇಟಿ, ವರ್ತಕರ ಸಮಸ್ಯೆ ಚರ್ಚೆ
Spread the loveಹುಬ್ಬಳ್ಳಿ: ಇಲ್ಲಿಯ ಅಮರಗೋಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಬುಧವಾರ ಭೇಟಿ ನೀಡಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ …