Breaking News

ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಪ್ಯಾಕ್ಟರಿಯಲ್ಲಿ ಬೆಂಕಿ ಅವಘಡ- ಗಾಯಗೊಂಡಿದ್ದ ಮಹಿಳೆ ಸಾವು- ಸತ್ಯವರ ಸಂಖ್ಯೆ 5 ಕ್ಕೆ ಏರಿಕೆ

Spread the love

ಹುಬ್ಬಳ್ಳಿ: ನಗರದ ಹೊರವಲಯದಲ್ಲಿನ
ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಪ್ಯಾಕ್ಟರಿಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವಳು ಸಾವನ್ನಪ್ಪಿದ್ದು ಮೃತಳನ್ನ ನಿರ್ಮಲಾ ಹುಚ್ಚಣ್ಣವರ,(29) ಆಗಿದ್ದು
ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸನಲ್ಲಿ ಸಾವಿಗೀಡಾಗಿದ್ದಾಳೆ. ಈ ಮೂಲಕ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಐದಕ್ಕೇರಿದಂತಾಗಿದೆ.
ತಾರಿಹಾಳದ ಸ್ಪಾರ್ಕಲ್ ಪ್ಯಾಕ್ಟರಿಯಲ್ಲಿ ಬೆಂಕಿ ಅವಘಡದಲ್ಲಿ ಇಬ್ಬರು ಮಹಿಳೆಯರು , ಇಬ್ಬರು ಯುವಕರ ಸಾವನ್ನಪ್ಪಿದ್ದರು.
*ಮಾಲೀಕ ಬಂಧನ*
ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಆಕ್ಸನಿಕ್ ಇನ್ನೋವೇಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲಿಕ ಗದಗ ಮೂಲದ ಮುಂಬೈ ನಿವಾಸಿಯಾಸ ಉದ್ಯಮಿ ಅಬ್ದುಲ್ ಶೇಖ್‌ನನ್ನು ಬಂಧಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಇನ್ಸಪೆಕ್ಟರ್ ರಮೇಶ ಗೋಕಾಕ ಅವರ ನೇತೃತ್ವದಲ್ಲಿ ಆರೋಪಿಯನ್ನ ಧಾರವಾಡ ಬಳಿ ಆತನನ್ನು ವಶಕ್ಕೆ ಪಡೆಯಲಾಗಿದ್ದು ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎರಡಕ್ಕೇರಿದೆ.ಈಗಾಗಲೇ ಕಾರ್ಖಾನೆಯ ಮ್ಯಾನೇಜರ್ ಮಂಜುನಾಥ ಹರಿಜನನ್ನು ವಶಕ್ಕೆ ಪಡೆದಿದ್ದು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಶೇಖ್ ಜತೆ ಮತ್ತಿಬ್ಬರು ಪಾಲುದಾರರು ಇದ್ದಾರೆನ್ನಲಾಗಿದ್ದು ಅವರ ವಿವರ ಸಂಗ್ರಹಿಸಲಾಗುತ್ತಿದ್ದು ಹಾಗೂ ಫ್ಯಾಕ್ಟರಿ ಕಟ್ಟಡದ ಮೂಲ ಮಾಲಿಕ ಬನಶಂಕರಿ ದೀಕ್ಷಿತ ಅವರ ವಿಚಾರಣೆಯನ್ನೂ ಪೊಲೀಸರು ಮುಂದುವರಿಸಿದ್ದಾರೆ.


Spread the love

About Karnataka Junction

[ajax_load_more]

Check Also

ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.

Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …

Leave a Reply

error: Content is protected !!