ಹುಬ್ಬಳ್ಳಿ: ‘ಮುಖ್ಯಮಂತ್ರಿ ಸ್ಥಾನಕ್ಕೆ ಎಸ್.ಆರ್. ಪಾಟೀಲ ಪ್ರಬಲ ಸ್ಪರ್ಧಿ. ಆದರೆ ಅವರ ಮತ್ತು ಸಿದ್ದರಾಮಯ್ಯ ಅವರ ನಡುವೆ ಹೋಲಿಕೆ ಮಾಡುವುದು ಸರಿಯಲ್ಲ’ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಬಳಿಕ ಮುಖ್ಯಮಂತ್ರಿ ಯಾರಾಗಬೇಕು ಎಂದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್ ನಿರ್ಧರಿಸುತ್ತದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಹತ್ತಕ್ಕೂ ಹೆಚ್ಚು ಮಂದಿ ನಾಯಕರು ಮುಖ್ಯಮಂತ್ರಿಯಾಗಲು ಸಮರ್ಥರಿದ್ದಾರೆ. ಆ ಸ್ಥಾನಕ್ಕೆ ಯಾರು ಸೂಕ್ತ ಎನ್ನುವುದು ಚುನಾವಣೆ ನಂತರದ ತೀರ್ಮಾನ’ ಎಂದರು.
‘ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಜನರೇ ಹೇಳುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನದ ಕುರಿತು ಚರ್ಚೆಗಳು ನಡೆಯುತ್ತಿವೆ’ ಎಂದು ಹೇಳಿದರು.
Check Also
ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ
Spread the love ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ …