ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ರಾಜ್ಯದ ಜನತೆ ಇಂದಿಗೂ ಸ್ಮರಿಸುತ್ತಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಮುಂದೆಯೂ ಕೂಡ ರಾಜ್ಯದ ಜನತೆಗೆ ಉತ್ತಮ ಯೋಜನೆಗಳನ್ನು ಕೊಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ಕೊಟ್ಟರು.
ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಪಂಚದ ಭೂಪಟದಲ್ಲಿ ಕರ್ನಾಟಕವನ್ನು ಕಾಣಿಸುವಂತೆ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜನರು ಯಾವುದೇ ಭಯವಿಲ್ಲದೆ ಬದುಕುತ್ತಿದ್ದರು. ಯಾವುದೇ ಉದ್ಯಮ, ವ್ಯಾಪಾರ ವೃದ್ಧಿಗೆ ಶಾಂತಿ ಹಾಗೂ ಸಾಮರಸ್ಯ ಮುಖ್ಯ ಎಂದರು.ನೋಟು ರದ್ಧತಿಯಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದರು. ಈ ಕ್ರಮದ ಹಿಂದಿನ ಉದ್ದೇಶ ಕೆಲವೇ ಕೆಲ ಉದ್ಯಮಿಗಳಿಗೆ ಹಣ ವರ್ಗಾವಣೆ ಮಾಡುವುದೇ ಆಗಿತ್ತು. ಕಾರ್ಮಿಕರು, ರೈತರನ್ನು ನಾಶ ಮಾಡಲೆಂದೇ ಜಿಎಸ್ಟಿ ಜಾರಿ ಮಾಡಿದರು ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
“ಸಿದ್ದರಾಮಯ್ಯರೊಂದಿಗೆ ವಿಶೇಷ ಬಾಂಧವ್ಯವಿದೆ”: ನಾನು ಹುಟ್ಟುಹಬ್ಬ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಭಾಗವಹಿಸಲ್ಲ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯನವರೊಂದಿಗಿನ ವಿಶೇಷ ಬಾಂಧವ್ಯ ಕಾರಣ. ನಾನು ಅವರನ್ನು ಒಬ್ಬ ವ್ಯಕ್ತಿಯಾಗಿ ಅಷ್ಟೇ ಅಲ್ಲದೇ ವಿಚಾರದಲ್ಲೂ ಇಷ್ಟ ಪಡುತ್ತೇನೆ. ಬಡವರು ಮತ್ತು ದುರ್ಬಲರ ಬಗ್ಗೆ ಸಿದ್ದರಾಮಯ್ಯ ನವರಿಗಿರುವ ಮಾನವೀಯತೆ ಇದೆ ಎಂದರು.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …