ಹುಬ್ಬಳ್ಳಿ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಅಂಗವಾಗಿ ಸಿದ್ದರಾಮಯ್ಯೋತ್ಸವಕ್ಕೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬುಧವಾರ ಅಪಾರ ಪ್ರಮಾಣದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತೆರಿಳಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು ಎಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಗಂಗಾಧರ ದೊಡ್ಡವಾಡ ಹೇಳಿದರು.
ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಾನವರು ಒಬ್ಬ ಧೀಮಂತ ನಾಯಕ ಅಂತ ಮಹಾನ್ ನಾಯಕರ ಹುಟ್ಟು ಹಬ್ಬ ಜನಮನ ಸೆಳೆದು ನಾಡಿಗೆ ಮಾದರಿಯಾಯಿತು ಎಂದರು.
