ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ 6ನೇ ವೇತನ ಆಯೋಗ ಶಿಫಾರಸಿನಂತೆ ಈ ತಿಂಗಳಿಂದ ಜಾರಿಗೆ ಬರುವಂತೆ ವೇತನ ಹಾಗೂ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ 6ನೇ ವೇತನ ಆಯೋಗ 2018ರಲ್ಲಿ ಕೆಲ ನಿರ್ದಿಷ್ಟ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳನ್ನು ಮೇಲ್ದರ್ಜೆಗೇರಿಸುವಂತೆ ಶಿಫಾರಸು ಮಾಡಿತ್ತು.
ರಾಜ್ಯ ಸರ್ಕಾರದ ಆದೇಶಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶಿಫಾರಸು ಜಾರಿ ಸಂಬಂಧ ಸಮಿತಿಯೊಂದನ್ನು ರಚಿಸಿತ್ತು. ಸಮಿತಿ ವರದಿಯನ್ನು ನೀಡಿದ್ದು, ಅದರಂತೆ ಇದೀಗ ರಾಜ್ಯ ಸರ್ಕಾರ ವೇತನ ಪರಿಷ್ಕರಣೆ ಆದೇಶ ಹೊರಡಿಸಿದೆ. ಆಗಸ್ಟ್ 1ರಿಂದ ಈ ಪರಿಷ್ಕೃತ ವೇತನ, ಭತ್ಯೆ ಆದೇಶ ಜಾರಿಗೆ ಬರಲಿದೆ
