Breaking News

ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ಆರು ಜನ ಬಲಿ

Spread the love

ಯಾದಗಿರಿ: ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಒಂದೇ ಕುಟುಂಬದ ಆರು ಜನ ದಾರುಣವಾಗಿ ಸಾನ್ನಪ್ಪಿದ್ದಾರೆ. ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂರು ಜನ ಸಾವಿಗೀಡಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ಈ ದುರಂತ ಸಂಭವಿಸಿದೆ. 1 ವರ್ಷದ ಹೆಣ್ಣುಮಗು ಸೇರಿ 6 ಜನ ಮೃತಪಟ್ಟಿದ್ದಾರೆ. ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ಹಟ್ಟಿಯವರು ಎಂದು ತಿಳಿದು ಬಂದಿದೆ. ಇವರೆಲ್ಲರೂ ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಈ ದುರಂತ ಸಂಭವಿಸಿದೆ.

ಘಟನೆಯ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌, ಡಿವೈಎಸ್ಪಿ ಬಸವೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About gcsteam

    Check Also

    ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    Spread the loveಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ …

    Leave a Reply