ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೆಲವು ಕಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಗ್ರಾಮೀಣ ಭಾಗದ ಜನರು ಸಚಿವರ ವಿರುದ್ಧ ವಿನೂತನ ರೀತಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಹೌದು.. ಮಳೆಯಿಂದ ಗ್ರಾಮೀಣ ಭಾಗದ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಕ್ಷೇತ್ರದಲ್ಲಿ ಸಂಪೂರ್ಣವಾಗಿ ಹಾಳಾಗಿವೆ. ರಸ್ತೆಗಳ ಪರಿಸ್ಥಿತಿಯಂತೂ ಹೇಳ ತೀರದಾಗಿದೆ. ಇದರಿಂದಾಗಿಯೇ ರೋಡ್‌ಗಳ ಮೇಲೆ ಮುಳ್ಳುಗಳನ್ನು ಇಟ್ಟು ರಸ್ತೆ ಬಂದ್ ಮಾಡಿದ ಗ್ರಾಮಸ್ಥರು ಸಚಿವರ ಹಾಗೂ ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದರು.
ರಸ್ತೆಗಳ ಅಭಿವೃದ್ಧಿ ಮಾಡುವಂತೆ ಸಂಬಂಧಿಸಿದವರೆಲ್ಲರ ಗಮನಕ್ಕೆ ತಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮಸ್ಥರು ಯಾರೂ ತಲೆ ಕೆಡಿಸಿಕೊಳ್ಳದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಡೆಗೆ ಬೇಸತ್ತು ರಸ್ತೆಗಳ ಮೇಲೆ ಮುಳ್ಳಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗಳನ್ನು ಅಭಿವೃದ್ಧಿ ಮಾಡುವವರೆಗೂ ಮುಳ್ಳು ತೆರವುಗೊಳಿಸಿದಂತೆ ಗ್ರಾಮಸ್ಥರ ನಿರ್ಧಾರ ಮಾಡಿದ್ದಾರೆ.
ಈಗಾಗಲೇ ನವಲಗುಂದ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಶಿರಗುಪ್ಪಿ, ಹಾಳಕುಸುಗಲ್, ಶಿರಕೋಳ, ಮೊರಬ, ಹಳ್ಳಿಕೇರಿ ಮುಂತಾದ ಗ್ರಾಮಗಳಲ್ಲಿ ಹೆದೆಗೆಟ್ಡ ರಸ್ತೆಗಳ ಸುಧಾರಣೆಗೆ ಆಗ್ರಹಿಸಿ ಅನೇಕ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು ಅಲ್ಲಿನ ಜನರು. ಆದರೆ ಯಾವುದೇ ರೀತಿಯ ಸ್ಪಂದನೆಯನ್ನು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾಡಲೇ ಇಲ್ಲ. ಕೇವಲ ಅಭಿವೃದ್ಧಿ ಪರ್ವವೇ ಕ್ಷೇತ್ರದಲ್ಲಿ ಆಗಿದೆ ಎಂದು ಹೇಳಿಕೊಳ್ಳುತ್ತಾ ಬಿಗುತಿದ್ದು ವಾಸ್ತವವಾಗಿ ಜನರು ಪಡಬಾರದ ಕಷ್ಟ ಪಡುತಿದ್ದಾರೆ. ಸಚಿವರು ನಿರ್ಲಕ್ಷ್ಯ ಮತ್ತು ಯಾವುದೇ ಅಭಿವೃದ್ಧಿ ಕಾರ್ಯ ಇಲ್ಲದೇ ಜನ ರೋಸಿ ಹೋಗಿದ್ದು ಮುಂದಿನ ಚುನಾವಣೆಯಲ್ಲಿ ಸಹ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ಈ ಹಿಂದೆ ನೀಡಿದ್ದರು.ಆದರೂ ಯಾವುದೇ ರೀತಿಯ ಜನರ ಸಮಸ್ಯೆಗಳಿಗೆ ಸ್ಪಂದನೆ ಆಗುತಿಲ್ಲ. ಇನ್ನು ಅಧಿಕಾರಿಗಳ ಮಾತು ಬೇರೆನೇ ಇದೆ ಯಥಾ ಪ್ರಭು ತಥಾ ಪ್ರಜಾ ಎನ್ನುವಂತೆ ಅಧಿಕಾರಿಗಳಿಗೆ ಯಾರು ಹೇಳುವರು ಕೇಳುವವರು ಇಲ್ಲದಂತಾಗಿದೆ. ಕುಂಭ ನಿದ್ರೆಯಲ್ಲಿ ಇರುವವರಿಗೆ ತಕ್ಕ ಪಾಠ ಕಲಿಸುವವರಿಗೆ ಕ್ಷೇತ್ರ ಉದ್ಧಾರವಾಲ್ಲ ಅಂತಾ ಕಾಣಿಸುತ್ತಿದೆ.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …