ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಕೊವಿಡ್ ದೃಢಪಟ್ಟ ಬಗ್ಗೆ ಟ್ವೀಟ್ ಮಾಡಿ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಸಂಪರ್ಕಿತರಿಗೆ ಟೆಸ್ಟ್ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದು, ಕೋವಿಡ್ ಪಾಸಿಟಿವ್ ಹಿನ್ನೆಲೆ ಸಿಎಂ ದೆಹಲಿ ಪ್ರವಾಸ ರದ್ದು ಮಾಡಲಾಗಿದೆ. ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.
