ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ ಮಹಿಳೆಯರ 50 ಕೆಜಿ ಪ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಪೂಜಾ ಗೆಹ್ಲೋಟ್ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಕಾದಾಟಲ್ಲಿ ಪೂಜಾ ಗೆಹ್ಲೋಟ್, ಸ್ಕಾಟ್ಲೆಂಡ್‌ನ ಕ್ರಿಸ್ಟಿಲ್ಲೇ ಲಮೊಫೆಕ್ ಲೆಚಿಡ್ಜೊ ಎದುರು 12-2 ಅಂತರದ ಗೆಲುವು ಸಾಧಿಸಿದರು. ಇನ್ನು ಚಿನ್ನದ ಪದಕ ಗೆಲ್ಲಲು ಸಾಧ್ಯವಾಗದೇ ಇರುವುದಕ್ಕೆ ಕಣ್ಣೀರಿಡುತ್ತಲೇ ದೇಶದ ಕ್ಷಮೆ ಕೂರಿದ ಪೂಜಾಗೆ ಪ್ರಧಾನಿ ನರೇಂದ್ರ ಮೋದಿ ಸ್ಪೂರ್ತಿದಾಯಕ ಮಾತುಗಳನ್ನಾಡುವ ಮೂಲಕ ಸಮಾಧಾನ ಮಾಡಿದ್ದಾರೆ.
ಕಂಚಿನ ಪದಕ ಗೆದ್ದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಪೂಜಾ ಗೆಹ್ಲೋಟ್, ನಾನು ಸೆಮಿಫೈನಲ್‌ನಲ್ಲಿ ಸೋಲು ಕಂಡಿರುವುದಕ್ಕೆ ತುಂಬಾ ದುಃಖವಾಗುತ್ತಿದೆ. ಇದಕ್ಕಾಗಿ ನಾನು ದೇಶದ ಜನರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಪೂಜಾ ಕಣ್ಣೀರಿಟ್ಟರು.
ಇದಕ್ಕೆ ಪೂಜಾ, ನಿಮ್ಮ ಪದಕವೇ ಸಂಭ್ರಮ ಆಗಬೇಕು. ಅದು ಬಿಟ್ಟು ಕ್ಷಮೆ ಕೇಳುವುದಲ್ಲ. ನಿಮ್ಮ ಜೀವನ ಪ್ರಯಾಣ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾದದ್ದು. ನಿಮ್ಮ ಯಶಸ್ಸು ನಮ್ಮೆಲ್ಲರಿಗೂ ಸಂತೋಷ ಮೂಡಿಸಿದೆ. ನಿಮಗೆ ಉಜ್ವಲ ಭವಿಷ್ಯವಿದೆ. ಇದೇ ರೀತಿ ಮಿಂಚುತ್ತಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.