Breaking News

ಪರೀಕ್ಷೆಗೆ ಬಂದ ಅಭ್ಯರ್ಥಿಗಳ ಅಂಗಿ ತೋಳು ಕಟ್ ಮಾಡಿದ ಸಿಬ್ಬಂದಿ

Spread the love

ಕೊಪ್ಪಳ : ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಉದ್ದ ತೋಳಿನ ಅಂಗಿ ಹಾಕಿಕೊಂಡು ಬಂದಿದ್ದ ಅಭ್ಯರ್ಥಿಗಳಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ.

ರಾಜ್ಯಾದ್ಯಂತ ಇಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದ ನವಚೇತನ ಪಬ್ಲಿಕ್ ಶಾಲೆ ಕೇಂದ್ರದಲ್ಲೂ ಪರೀಕ್ಷೆ ನಡೆಯುತತ್ತಿತ್ತು. ಈ ವೇಳೆ ಪರೀಕ್ಷೆಗೆ ಉದ್ದನೆಯ ತೋಳಿನ ಅಂಗಿ ಹಾಕಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಬೇರೆ ಶರ್ಟ್ ಧರಿಸಿ ಬರುವಂತೆ ಸೂಚಿಸಲಾಗಿದೆ.

ಪಿಎಸ್‍ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕಟ್ಟಳೆ ವಿಧಿಸಲಾಗಿದೆ. ಜಿಲ್ಲಾದ್ಯಂತ 22 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿವೆ.

ದೂರ ದೂರಿಂದ ಬಂದವರಿಗೆ ಬದಲಿ ಶರ್ಟ್ ಇಲ್ಲದಿದ್ದರೆ, ತೋಳು ಕತ್ತರಿಸಿಕೊಂಡು ಒಳಬರುವಂತೆ ತಿಳಿಸಿದ್ದಾರೆ. ಇಲ್ಲದಿದ್ದರೆ ಒಳ ಬಿಡುವುದಿಲ್ಲವೆಂದು ನಿಷೇಧ ಹೇರಿದ್ದಾರೆ. ಅನಿವಾರ್ಯವಾಗಿ ಅಭ್ಯರ್ಥಿಗಳ ತೋಳನ್ನು ಸಿಬ್ಬಂದಿ ಕತ್ತರಿಸಿ ಒಳಗೆ ಕಳುಹಿಸಿದ್ದಾರೆ . ಕೆಲವರು ಬೇರೆ ಅಂಗಿ ಖರೀದಿಸಿ ಧರಿಸಿ ಪರೀಕ್ಷೆಗೆ ಹಾಜರಾಗಿದ್ದಾರೆ.


Spread the love

About Karnataka Junction

[ajax_load_more]

Check Also

ರಾಜ್ಯ ಪ್ರಶಸ್ತಿಗೆ ಈರಪ್ಪ ಎಮ್ಮಿ ಆಯ್ಕೆ

Spread the loveರಾಜ್ಯ ಪ್ರಶಸ್ತಿಗೆ ಈರಪ್ಪ ಎಮ್ಮಿ ಆಯ್ಕ ಹುಬ್ಬಳ್ಳಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ …

Leave a Reply

error: Content is protected !!