ಹುಬ್ಬಳ್ಳಿ : ಸತತ 21 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ಸೇನಾ ನಿವೃತ್ತಿ ಹೊಂದಿ ಗ್ರಾಮಕ್ಕೆ ಆಗಮಿಸಿದ ಯೋಧನನ್ನು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ದೇವನೂರು ಗ್ರಾಮಸ್ಥರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.
ಗ್ರಾಮದ ಸುರೇಶ್ ಬಸಪ್ಪ ನೇಗಿನಾಳ ಅವರು ಸೇನಾ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದರು. ಇವರು ಬಿಎಸ್‍ಎಫ್ ಯೋಧರಾಗಿ ಪಶ್ಚಿಮ ಬಂಗಾಳ, ಪಂಜಾಬ್, ಜಮ್ಮು-ಕಾಶ್ಮೀರ ಸೇರಿದಂತೆ ವಿವಿಧೆಡೆ ಸೇವೆ ಸಲ್ಲಿಸಿ ವಯೋನಿವೃತ್ತಿ ಪಡೆದಿದ್ದಾರೆ. ಪ್ರಸ್ತುತ ಅವರು ಸ್ವಗ್ರಾಮಕ್ಕೆ ಮರಳಿದ್ದು, ಅವರ ಬರುವಿಕೆಯನ್ನು ಇಡೀ ಗ್ರಾಮದ ಜನರು ಹಬ್ಬದ ರೀತಿ ಮಾಡಿದ್ದಾರೆ.
ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವೀರ ಯೋಧನನ್ನು ತೆರೆದ ವಾಹನದಲ್ಲಿ ಊರಿನ ತುಂಬಾ ಮೆರವಣಿಗೆ ನಡೆಸಿ ಜಯಘೋಷ ಹಾಕಿ, ಆರತಿ ಬೆಳಗಿ, ಕೇಕ್ ಕಟ್ ಮಾಡಿ, ಪುಷ್ಪಾರ್ಚನೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಿದರು.