Breaking News

ಹಿಂದೂ,ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮುಸ್ಲಿಂ ಕುಟುಂಬ

Spread the love

ಕೊಪ್ಪಳ: ಹಿಂದೂ ಮತ್ತು ಮುಸ್ಲಿಂ ಸಾಮರಸ್ಯಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುಸ್ಲಿಂ ಕುಟುಂಬ ಸಾಕ್ಷ್ಯಿಯಾಗಿದೆ.

ಶುಕ್ರವಾರ ಹಿಂದೂ ಸಂಸ್ಕೃತಿ ವರಮಹಾಲಕ್ಷ್ಮಿ ಹಬ್ಬವನ್ನು ನೆರವೇರಿಸುವ ಭಾವೈಕ್ಯತೆಯನ್ನು ಅಳವಂಡಿ ಗ್ರಾಮದ ನಜೀರುದ್ದಿನ್ ಕುಟುಂಬ ಸಾರಿದೆ. ಧಾರ್ಮಿಕ ಆಚರಣೆಗಳನ್ನು ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆಯಿಂದ ಆಚರಿಸುತ್ತಾ ಬಂದಿದ್ದಾರೆ. ಪ್ರತಿಯೊಂದು ಧಾರ್ಮಿಕ ಆಚರಣೆಗಳನ್ನು ಒಗ್ಗಟ್ಟಾಗಿ ಆಚರಿಸುತ್ತಾರೆ. ಅದರಂತೆ ಮುಸ್ಲಿಂ ಸಮುದಾಯದ ಕುಟುಂಬವೊಂದು ಕಳೆದ ಮೂರು ವರ್ಷಗಳಿಂದ ತಮ್ಮ ಹಬ್ಬಗಳನ್ನು ಆಚರಿಸುವ ರೀತಿಯಲ್ಲಿಯೇ ಸಂಪ್ರದಾಯ ಬದ್ಧವಾಗಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುತ್ತಾ ಬಂದಿದ್ದಾರೆ.

ಅಳವಂಡಿ ಗ್ರಾಮದ ನಜುರುದ್ದೀನ್ ಬಿಸರಳ್ಳಿ ಅವರು ಮುಸ್ಲಿಂ ಕುಟುಂಬದ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಮನೆತನದ ಹಬ್ಬದ ರೀತಿ ಆಚರಿಸುತ್ತಿದ್ದಾರೆ. ಹಬ್ಬದ ಪ್ರಯುಕ್ತ ಮನೆಯನ್ನು ದೀಪಾಲಂಕಾರ ಮಾಡುವ ಮೂಲಕ ವಿಶೇಷ ಪೂಜೆ ನೆರವೇರಿಸಿದ್ದಾರೆ. ಹೋಳಿಗೆ ನೈವೇದ್ಯ, ವಿವಿಧ ತರಹದ ಹಣ್ಣುಗಳು ಸಮರ್ಪಿಸಿ, ಹಣತೆ ಹಚ್ಚಿ ಭಾವೈಕ್ಯತೆ ಮೆರೆದಿದ್ದಾರೆ.


Spread the love

About Karnataka Junction

    Check Also

    ಸಚಿವರಾಗಿ ಬಂದ ಮೊದಲ ದಿನವೇ ಆಡಳಿತಯಂತ್ರಕ್ಕೆ ಚುರುಕು ಮುಟ್ಟಿಸಿದ ಕೇಂದ್ರ ಸಚಿವ ಜೋಶಿ

    Spread the loveಸಚಿವರಾಗಿ ಬಂದ ಮೊದಲ ದಿನವೇ ಆಡಳಿತಯಂತ್ರಕ್ಕೆ ಚುರುಕು ಮುಟ್ಟಿಸಿದ ಕೇಂದ್ರ ಸಚಿವ ಜೋಶಿ ಕಿಮ್ಸ್ ಆಸ್ಪತ್ರೆ ನಿರ್ದೇಶಕರಿಗೆ …

    Leave a Reply

    error: Content is protected !!