ತವರು ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣಕ್ಕೆ ಸಚಿವ ಆನಂದ್‌ ಸಿಂಗ್‌ ಗೆ ಗ್ರೀನ್ ಸಿಗ್ನಲ್

Spread the love

ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರಿಗೆ ತಮ್ಮ ಸ್ವಂತ ಜಿಲ್ಲೆ ವಿಜಯನಗರ ಉಸ್ತುವಾರಿ ಕೈ ತಪ್ಪಿತ್ತು.‌ ಆದರೆ, ಇದೀಗ ಅವರಿಗೆ ಆ. 15ರಂದು ತಮ್ಮ ತವರು ಜಿಲ್ಲೆಯಲ್ಲೇ ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.
ಆದೇಶ ಪ್ರತಿಆದೇಶದಲ್ಲಿ ಮೂರು ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಸಚಿವ ಆನಂದ್ ಸಿಂಗ್​​​ ಅವರಿಗೆ ತವರು ಜಿಲ್ಲೆ ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಮಂಡ್ಯದಲ್ಲಿ ಸಚಿವ ಆರ್.ಅಶೋಕ್ ಅವರಿಗೆ ಧ್ವಜಾರೋಹಣ ಮಾಡುವ ಹೊಣೆ ನೀಡಲಾಗಿದೆ.ಆಯಾ ಜಿಲ್ಲೆಯ ಉಸ್ತವಾರಿ ಸಚಿವರಿಗೆ ಆಯಾ ಜಿಲ್ಲೆಗಳಲ್ಲಿ ಆ.15ರಂದು ಧ್ವಜಾರೋಹಣ ಮಾಡುವ ಹೊಣೆಗಾರಿಕೆ ನೀಡಲಾಗಿದೆ. ಆದರೆ, ಸಚಿವ ಆನಂದ್ ಸಿಂಗ್ ತವರು ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲು ಅವಕಾಶ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಇದೀಗ ಮೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಇತ್ತೀಚೆಗೆ ಸಚಿವ ಆನಂದ್ ಸಿಂಗ್ ಅವರಿಗೆ ವಿಜಯನಗರ ಜಿಲ್ಲಾ ಉಸ್ತವಾರಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಿ ಆದೇಶಿಸಲಾಗಿತ್ತು. ಯಾವ ಸಚಿವರಿಗೂ ತವರು ಜಿಲ್ಲೆಯ ಉಸ್ತುವಾರಿ ನೀಡಬಾರದು ಎಂಬ ಹೈ ಕಮಾಂಡ್ ಸೂಚನೆ ಇದ್ದರೂ ಸಿಎಂ ಈ ಆದೇಶ ಹೊರಡಿಸಿದ್ದರು.ಬಳಿಕ ಇತರ ಉಸ್ತುವಾರಿ ಸಚಿವರು ತಮಗೂ ತವರು ಜಿಲ್ಲೆ ಉಸ್ತುವಾರಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಲು ಪ್ರಾರಂಭಿಸಿದ ಹಿನ್ನೆಲೆ ಸಿಎಂ ಅದೇ ದಿನ ಸಂಜೆ ಸಚಿವ ಆನಂದ್ ಸಿಂಗ್​​ಗೆ ತವರು ಜಿಲ್ಲೆ ಉಸ್ತುವಾರಿ ‌ನೀಡಿದ್ದ ಆದೇಶವನ್ನು ಹಿಂಪಡೆದಿದ್ದರು.
ನೂತನ ವಿಜಯನಗರ ಜಿಲ್ಲೆಯಲ್ಲಿ 405 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣ ಮಾಡಲಾಗಿದೆ. ಇದು ದೇಶದಲ್ಲೇ ಅತಿ ಎತ್ತರದ ಧ್ವಜಸ್ತಂಭ ಎಂದು ಹೇಳಲಾಗುತ್ತಿದೆ. ಆ.15 ರಂದು ಸಚಿವ ಆನಂದ್​​ ಸಿಂಗ್​​ ಧ್ವಜಾರೋಹಣ ನೆರವೇರಿಸುವ ಮೂಲಕ ಐತಿಹಾಸಿಕ ಕ್ಷಣದ ಕೇಂದ್ರ ಬಿಂದುವಾಗಲಿದ್ದಾರೆ. ಆದ್ದರಿಂದ ಈಗ ಬೇರೆ ಜಿಲ್ಲೆಯ ಉಸ್ತುವಾರಿ ಸಚಿವರಿದ್ದಿರಿ ಸಹ ತಮ್ನ ಸ್ವ ಕ್ಷೇತ್ರದಲ್ಲಿ ಧ್ವಜಾರೋಹಣ ಮಾಡಲು ಅವಕಾಶ ಗಿಟ್ಟಿಸಿಕೊಂಡ ಆನಂದ್ ಸಿಂಗ್ ಅವರ ಗಟ್ಟಸ್ತನದ ಮಾತೇ ಈ ಗ ಎಲ್ಲಡೆ.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply