ಏಕಾಏಕಿ ರಾಷ್ಟ್ರಧ್ವಜ ಬಣ್ಣ ಬದಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯಾ

Spread the love

ಚಿಕ್ಕಮಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಿಜೆಪಿ ಮುಖಂಡ ಗಿರೀಶ್ ಹಾಗೂ ಬಜರಂಗದಳದ ಶಿವಕುಮಾರ್ ನೇತೃತ್ವದಲ್ಲಿ ಆಲ್ದೂರು ಪೊಲೀಸ್ ಠಾಣೆಗೆ ತೆರಳಿದ ಪ್ರಮುಖರು ದೂರು ಸಲ್ಲಿಸಿದ್ದಾರೆ.
ಸಿದ್ದರಾಮಯ್ಯನವರು ಬಾವುಟದ ಬಣ್ಣಗಳು ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ, ಹಸಿರು ಎಂದು ಹೇಳುವ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಜೆಪಿ ಜಿಲ್ಲಾ ಮುಖಂಡರು ದೂರಿನಲ್ಲಿ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಹೋರಾಟದ ಎಚ್ಚರಿಕೆ ಸಹ ನೀಡಿದ್ದಾರೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply