ಹುಬ್ಬಳ್ಳಿ: ನಗರದ ವೀರಾಪುರ ಓಣಿ ಸಮೀಪದ ಗೊಲ್ಲರ ಗಲ್ಲಿಯ ಸಿದ್ಧಾರೂಢ ಮಠದ ಬಳಿ ಅಪ್ರಾಪ್ತನೊಬ್ಬ ಸಂಬಂಧಿಯ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
15 ವರ್ಷದ ಬಾಲಕನು ಅಂದಾಜು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಗ್ಗೆ ಬೆಂಡಿಗೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಾಲಕ ಮಠದ ಬಳಿ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಅದೇ ಓಣಿಯಲ್ಲಿರುವ ಅಂಗನವಾಡಿ ಕಟ್ಟಡದ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಈ ಕುರಿತು ಬಾಲಕಿಯ ತಾಯಿ ಬೆಂಡಿಗೇರಿ ಠಾಣೆಯಲ್ಲಿ ದೂರು ನೀಡಿದ್ದು,ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿದು ಬರಲಿದೆ.
