ನವದೆಹಲಿ: ಬಹು ನೀರಿಕ್ಷಿತ ಎಂದು ಭಾವಿಸಲಾಗಿದ್ದ ಅನ್ನದಾತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಲ್ಪಾವಧಿಯ ಕೃಷಿ ಸಾಲದ ಬಡ್ಡಿಗೆ ಸಹಾಯಧನ ಘೋಷಿಸಲಾಗಿದ್ದು 3 ಲಕ್ಷ ರೂ ವರೆಗಿನ ಸಾಲಕ್ಕೆ ಶೇ.1.5ರಷ್ಟು ಬಡ್ಡಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಾವಧಿ ಕೃಷಿ ಸಾಲಗಳಿಗೆ ಬಡ್ಡಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಸಾಲದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಭೆಯ ನಂತರ ಕೇಂದ್ರ ಸಚಿವ ಅನುರಾಗ ಠಾಕೂರ್ ತಿಳಿಸಿದರು.ಸಾರ್ವಜನಿಕ ವಲಯದ ಬ್ಯಾಂಕ್ಗಳು, ಖಾಸಗಿ ವಲಯದ ಬ್ಯಾಂಕ್ಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು, ಸಹಕಾರಿ ಬ್ಯಾಂಕುಗಳು ಸೇರಿ ಕೃಷಿ ಸಾಲ ನೀಡುವ ಎಲ್ಲ ಹಣಕಾಸು ಸಂಸ್ಥೆಗಳು ಶೇ.1.5ರ ಬಡ್ಡಿ ಸಬ್ಸಿಡಿ ಪಡೆಯುತ್ತವೆ. ಈ ಯೋಜನೆಯು 2022-23 ಮತ್ತು 2024-25ನೇ ಆರ್ಥಿಕ ವರ್ಷದಲ್ಲಿ 3 ಲಕ್ಷ ರೂ.ಗಳೊಳಗಿನ ಕೃಷಿ ಸಾಲಗಳಿಗೆ ಅನ್ವಯಿಸುತ್ತದೆ ಎಂದು ಮಾಹಿತಿ ನೀಡಿದರು.
ಈ ನಿರ್ಧಾರದಿಂದ ಸರ್ಕಾರದ ಬಜೆಟ್ ಮೇಲೆ ರೂ.34,856 ಕೋಟಿ ರೂಪಾಯಿಗಳಷ್ಟು ಹೊರೆಯಾಗುತ್ತದೆ. ಆದರೆ, ಬಡ್ಡಿ ಸಬ್ಸಿಡಿಯಿಂದ ಕೃಷಿ ಕ್ಷೇತ್ರಕ್ಕೆ ಲಾಭವಾಗುವುದಲ್ಲದೇ, ಸಾಲ ನೀಡುವ ಸಂಸ್ಥೆಗಳು ಆರ್ಥಿಕವಾಗಿ ಚೇತರಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಸಚಿವರು ವಿವರಿಸಿದರು. ಮತ್ತೊಂದೆಡೆ, ಆಸ್ಪತ್ರೆ ಮತ್ತು ಪ್ರವಾಸ ವಲಯಗಳಿಗೆ ಸಂಬಂಧಿಸಿದ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯ ವೆಚ್ಚವನ್ನು 50 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಒಟ್ಟಾರೆ 4.5 ಲಕ್ಷ ಕೋಟಿಗಳಿಂದ 5 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೆಚ್ಚುವರಿ ಮೊತ್ತವನ್ನು ಸೇವಾ ಸಂಬಂಧಿತ ವಲಯಗಳ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುತ್ತದೆ.
2022-23ರ ಕೇಂದ್ರ ಬಜೆಟ್‌ನಲ್ಲಿ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯ ಮಿತಿಯನ್ನು ಹೆಚ್ಚಿಸಲು ಪ್ರಸ್ತಾಪಿಸಿತ್ತು. ಸೇವಾ ಸಂಬಂಧಿತ ವಲಯಗಳಲ್ಲಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಉಂಟಾದ ತೊಂದರೆಗಳಿಂದಾಗಿ ಈ ಮೊತ್ತವನ್ನು ಹೆಚ್ಚಿಸಲಾಗಿದೆ. ಅಲ್ಲದೇ, ಈ ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯಡಿ 2022ರ ಆಗಸ್ಟ್ 5ರವರೆಗೆ ಸುಮಾರು 3.67 ಲಕ್ಷ ಕೋಟಿ ಸಾಲಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವ ಅನುರಾಗ್ ಮಾಹಿತಿ ನೀಡಿದ್ದಾರೆ .
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …