Breaking News

ಸಂಪೂರ್ಣ ಮಾಹಿತಿ ಹಾಗೂ ಯಾವ ವೆಬ್ ಸೈಟ್ ನಲ್ಲಿ ನೋಡಬಹುದೆಂದು ಈ ಸುದ್ದಿ ಯಲ್ಲಿದೆ ಓದಿ….

Spread the love

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು.
ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ. ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್​ನಲ್ಲಿ ಪ್ರಕಟಿಸಲಾಗುತ್ತದೆ. 1:1 ಮುಖ್ಯ / ಅಂತಿಮ ಆಯ್ಕೆಪಟ್ಟಿಯನ್ನು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.ರಿಸಲ್ಟ್ ನೋಡುವ ಲಿಂಕ್: ಮೇ 21, 22, ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಕೆಳಗಿನ ಲಿಂಕ್ ಅನ್ನು ರಿಸಲ್ಟ್ ಗಾಗಿ https://www.schooleducation.kar.nic.in/index.html ಕ್ಲಿಕ್ ಮಾಡಬೇಕು ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.


Spread the love

About Karnataka Junction

    Check Also

    ಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ

    Spread the loveಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ ಹುಬ್ಬಳ್ಳಿ;ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ …

    Leave a Reply

    error: Content is protected !!