Breaking News

ಸಾವರ್ಕರ್ ಪೋಟೋಕ್ಕೆ ಬೆಂಕಿ ಇಟ್ಟ ಪ್ರಕರಣ; 12 ಜನ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು

Spread the love

ಧಾರವಾಡ : ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನ ಸಭಾ ಕ್ಷೇತ್ರದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಕೊಡಗಿನಲ್ಲಿ ಮೊಟ್ಟೆ ಹೊಡೆದಿರುವುದನ್ನು ಖಂಡಿಸಿ ಧಾರವಾಡದಲ್ಲಿ ಶುಕ್ರವಾರ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಯ ವೇಳೆ ಕೆಲವರು ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್‌ ಅವರ ಭಾವಚಿತ್ರವನ್ನು ಕಾಲಿನಲ್ಲಿ ತುಳಿದು, ಅದರ ಮೇಲೆ ಮೊಟ್ಟೆಒಡೆದು, ಬಳಿಕ ಉರಿಯುತ್ತಿರುವ ಬೆಂಕಿಯಲ್ಲಿ ಹಾಕಿ ಸುಟ್ಟು ಹಾಕಿದ್ದರು. ಈ ಘಟನೆಗೆ ಸಂಬಂಧಿಸಿದಂತೆ 12 ಜನ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ.
ಪ್ರತಿಭಟನೆ ವೇಳೆ ವೀರ ಸಾವರ್ಕರ್‌ಗೆ ಅವಮಾನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಶಿವಾನಂದ ಸತ್ತಿಗೇರಿ ದೂರು ದಾಖಲಿಸಿದ್ದಾರೆ. 12 ಜನ ಕಾಂಗ್ರೆಸ್ ಕಾರ್ಯಕರ್ತರ ಮೆಲೆ ಎಪ್ ಐ ಆರ್ ದಾಖಲಿಸಿ ತನಿಖೆ ಸಹ ಸೂಚನೆ ನೀಡಲಾಗಿದೆ.
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಿ‌ನ್ನೆ ಸಂಜೆ ನಡೆದ ಪ್ರಕರಣ, ಪ್ರತಿಭಟನೆ ವೇಳೆ ಸಾರ್ವಕರ್ ಪೋಟೋ ಸುಟ್ಡು ಮೊಟ್ಟೆ ಹೊಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಸ್ವಾತಂತ್ರ ಹೋರಾಟಗಾರರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವಿವಿಧ ಹಿಂದು ಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು‌. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಮಹಾನಗರ ಸಮಿತಿ ಅಧ್ಯಕ್ಷ ಅಲ್ತಾಪ್ ಹಳ್ಳೂರ,ಹುಬ್ಬಳ್ಳಿ ಧಾರವಾಡ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನಿಲ ಪಾಟೀಲ, ನಾಗರಾಜ್ ಗೌರಿ, ಆನಂದ ಸಿಂಗನಾಥ್,ಆಸಿಪ್ ಸನದಿ, ಸೌರಬ್ , ಅರವಿಂದ ಏಗನಗೌಡರ್, ಮೈನುದ್ದಿನ ನಧಾಪ್, ಮನೋಜ್ ಕರ್ಜಗಿ ರಾಬರ್ಟ ಸೇರಿದಂತೆ 12 ಜನ ಕಾಂಗ್ರೆಸ್ ಕಾರ್ಯಕರ್ತರ ಮೆಲೆ ಉಪನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಿನ್ನೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಈ ವೇಳೆ ಕೆಲವು ಪ್ರತಿಭಟನಾಕಾರರು ಏಕಾಏಕಿ ವೀರ ಸಾವರ್ಕರ ಭಾವಚಿತ್ರ ತಂದು ಅದಕ್ಕೆ ಮೊಟ್ಟೆಹೊಡೆದು ಬೆಂಕಿಗೆ ಹಾಕಿ ತಮ್ಮ ಸಿಟ್ಟನ್ನು ತೀರಿಸಿಕೊಂಡಿದ್ದರು. ಸಾವರ್ಕರ್‌ ಅವರ ಎರಡ್ಮೂರು ಫೋಟೋಗಳನ್ನು ಬೆಂಕಿಯಲ್ಲಿ ಹಾಕಿ ಸುಡಲಾಗಿತ್ತು.
*ನಮ್ಮ ಕಾರ್ಯಕರ್ತರು ಭಾವಚಿತ್ರ ಸುಟ್ಟಿಲ್ಲ: ಚಿಂಚೋರೆ ಸ್ಪಷ್ಟನೆ*
ಕಾಂಗ್ರೆಸ್‌ ಪಕ್ಷದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ವೀರ ಸಾವರ್ಕರ್‌ ಭಾವಚಿತ್ರ ದಹಿಸಿಲ್ಲ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ದೀಪಕ ಚಿಂಚೋರೆ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆಎಸೆದ ಕೃತ್ಯವನ್ನು ಖಂಡಿಸಿ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪಾದಯಾತ್ರೆ ನಡೆಸಿ, ನಂತರ ಅಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಪ್ರತಿಕೃತಿ ದಹಿಸಿ, ಬಳಿಕ ಜಿಲ್ಲಾಧಿಕಾರಿಗೆ ಮನವಿ ಕೂಡ ಸಲ್ಲಿಸಲಾಯಿತು. ಆದರೆ, ಪ್ರತಿಭಟನೆ ಸಮಯದಲ್ಲಿ ಯಾವುದೇ ಕಾಂಗ್ರೆಸ್‌ ಮುಖಂಡರಾಗಲಿ ಅಥವಾ ಕಾರ್ಯಕರ್ತರು ವೀರ ಸಾವರ್ಕರ್‌ ಅವರ ಭಾವಚಿತ್ರ ಅಥವಾ ಪ್ರತಿಕೃತಿ ದಹಿಸಿಲ್ಲ. ಈ ವಿಷಯ ನಮ್ಮ ಗಮನಕ್ಕೂ ಬಂದಿಲ್ಲ. ಆದ್ದರಿಂದ ಈ ಪ್ರಕರಣ ನಮಗೆ ಸಂಬಂಧಿಸಿದಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಇಂತಹ ಘಟನೆ ನಡೆದಿದ್ದರೆ ಅದು ಕಾಂಗ್ರೆಸ್ಸಿಗರ ಮೇಲೆ ಗೂಬೆ ಕೂಡಿಸುವ ಷಡ್ಯಂತ್ರದ ಭಾಗವಾಗಿರಬಹುದು ಎಂದು ತಿಳಿಸಿದರು.
ಕಿಡಿಗೇಡಿಗಳ ಬಂಧನಕ್ಕೆ ಬಿಜೆಪಿ ಆಗ್ರಹ: ವೀರ ಸಾವರ್ಕರ ಭಾವಚಿತ್ರ ದಹಿಸಿ ಕಿಡಿಗೇಡಿಗಳನ್ನು ಪತ್ತೆ ಮಾಡಿ ಬಂಧಿಸುವಂತೆ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಉಪನಗರ ಠಾಣೆ ಎದುರು ಶುಕ್ರವಾರ ರಾತ್ರಿ ದಿಢೀರ್‌ ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಮೊಟ್ಟೆಎಸೆತ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ವೇಳೆಯಲ್ಲಿ ಸಾವರ್ಕರ್‌ ಭಾವಚಿತ್ರ ದಹನ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆ ಬಿಜೆಪಿಗರು ಪ್ರತಿಭಟಿಸಿದರು.
ಧಾರವಾಡ ಶಾಂತಿ-ಸುವ್ಯವಸ್ಥೆಗೆ ಹೆಸರಾಗಿದೆ. ಇದಕ್ಕೆ ಭಂಗ ತರುವ ಹುನ್ನಾರದಿಂದ ಕಾಂಗ್ರೆಸ್‌ ಕಾರ್ಯಕರ್ತರು, ಸಾವರ್ಕರ್‌ ಭಾವಚಿತ್ರ ದಹಿಸಿದ್ದಾರೆ ಎಂದು ಬಿಜೆಪಿ, ವಿಎಚ್‌ಪಿ, ಆರ್‌ಎಸ್‌ಎಸ್‌ ಕಾರ್ಯಕರ್ತರು ಆರೋಪಿಸಿದರು. ಕೃತ್ಯ ಎಸಗಿದ ಕಿಡಗೇಡಿಗಳನ್ನು ಪತ್ತೆಹಚ್ಚಿ, ಬಂಧಿಸುವ ಮೂಲಕ ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲವಾದರೆ, ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿ, ಡಿಸಿಪಿ ಶಾಹಿಲ್‌ ಭಾಗ್ಲಾ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶಿವಾನಂದ ಸತ್ತಿಗೇರಿ, ಸಂಜಯ ಕಪಟಕರ, ಮೋಹನ್‌ ರಾಮದುರ್ಗ, ಶಂಕರ ಶೇಳಕೆ, ಬಸವರಾಜ ಅರಳಿಮಟ್ಟಿ, ಸುರೇಶ ಬೇದರೆ, ರಾಕೇಶ ನಾಝರೆ, ಮಂಜು ಬಟ್ಟಣವರ ಇದ್ದರು.


Spread the love

About Karnataka Junction

    Check Also

    ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ

    Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …

    Leave a Reply

    error: Content is protected !!