ಹುಬ್ಬಳ್ಳಿ; ಯುವ ಮುಖಂಡ ಮಹೇಶ್ ಎಸ್. ಹಂಜಗಿ ಅವರನ್ನ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ವಿಭಾಗದ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಇಂದಿರಾ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾದ ಆರ್. ಧರ್ಮಸೇನಾ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದ್ದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಯ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್ ನೇಮಕಾತಿ ಪತ್ರ ನೀಡಿದರು.
ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಹ ಈ ಮೂಲಕ ತಿಳಿಸಲಾಗಿದೆ. ಶಾಸಕ ಅಬ್ಬಯ್ಯಾ ಪ್ರಸಾದ್, ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು,
ಪಜಾಪಪಂ ಅಧ್ಯಕ್ಷ ಬಸವರಾಜ ಬೆಣಕಲ್ ಹಾಗೂ ಅಪಾರ ಕಾರ್ಯಕರ್ತರಿದ್ದರು.
