21 ಟ್ರಸ್ಟ್​ , ಪ್ರತಿಷ್ಠಾನಗಳ ಅಧ್ಯಕ್ಷರು, ಸದಸ್ಯರ ನೇಮಕ ರದ್ದು

Spread the love

ಬೆಂಗಳೂರು: ಬುಧವಾರವಷ್ಟೇ 21 ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ವಾಪಸ್​ ಪಡೆದಿದೆ.
ನಿನ್ನೆ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಕಾತಿ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿತ್ತು. ಆದರೆ, ಕೆಲವರು ಪ್ರತಿಷ್ಠಾನಗಳ ಅಧ್ಯಕ್ಷ ಸ್ಥಾನವನ್ನು ನಿರಾಕರಣೆ ಮಾಡಿದ್ದರು. ಜೊತೆಗೆ ಕೆಲವು ಎಡವಟ್ಟುಗಳೂ ಆಗಿದ್ದವು. ಈ ಸಂಬಂಧ ವ್ಯಾಪಕ‌ ಟೀಕೆ ವ್ಯಕ್ತವಾದ ಹಿನ್ನೆಲೆ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿಂಪಡೆದಿದೆ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರನ್ನಾಗಿ ದಿ.ತೇಜಸ್ವಿ ಪತ್ನಿ ರಾಜೇಶ್ವರಿ ಅವರನ್ನು ನೇಮಕ ಮಾಡಲಾಗಿತ್ತು. ರಾಜೇಶ್ವರಿ ಅವರು ಕಳೆದ ಡಿಸೆಂಬರ್‌ನಲ್ಲಿ ನಿಧನರಾಗಿದ್ದರು. ಇಂತಹ ಹೆಸರನ್ನು ಆಯ್ಕೆ ಮಾಡಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು. ಅಲ್ಲದೇ, ಇದೇ ಪ್ರತಿಷ್ಠಾನಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದ ನರೇಂದ್ರ ರೈ ದೇರ್ಲ ಅವರು ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದರು. ಇದರಿಂದಾಗಿ
ಆಡೋಣೋ ಬಾ ಕೆಡಿಸೋಣೋ ಬಾ ಎಂಬ ರೀತಿಯಲ್ಲಿ ಸರ್ಕಾರದ ಆಡಳಿತ ವೈಖರಿಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply