ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಮೂರು ಜನ ಸೇರಿಕೊಂಡು ರೋಗಿಗಳಿಗೆ ಬೈಬಲ್ ಹಂಚುತ್ತಿದ್ದು ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿ ಬೈಬಲ್ ಪ್ರತಿ ವಶಕ್ಕೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಮಾಹಿತಿ ತಿಳಿಯುತಿದ್ದಂತೆ ಬಜರಂಗದಳ ಕಾರ್ಯಕರ್ತರು ವಿದ್ಯಾ ನಗರದಲ್ಲಿನ ಕಿಮ್ಸ್ ಭೇಟಿ ನೀಡಿ ವಿದ್ಯಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಕೂಡಲೇ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ತೆಗದುಕೊಳ್ಳಬೇಕು ಎಂದು ಬಜರಂಗದಳ ವಿಭಾಗ ಸಂಚಾಲಕರಾದ ಶಿವಾನಂದ ಸತ್ತಿಗೇರಿ ಅವರು ಆಗ್ರಹಿಸಿದರು. ಹಾಗೂ ಅವರ ಮೇಲೆ ಶಿವಾನಂದ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿಲು ಸಹ ದೂರು ನೀಡಿ ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ವಿಜಯ ಕ್ಷೀರಸಾಗರ, ಹಾಗೂ ಯಲ್ಲಪ್ಪ ಇನ್ನುತರ ಕಾರ್ಯಕರ್ತರು ಉಪಸ್ಥಿತರಿದ್ದರು.
Check Also
ವಿಧಾನ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ನಿಧನ
Spread the loveಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ , ವಕೀಲರು ಹಾಗೂ …