Breaking News

ಗುತ್ತಿಗೆದಾರರ ಸಂಘದ ಕೆಂಪಣ್ಣ ಕಾಂಗ್ರೆಸ್ ನಿಂದ ಕಮಿಷನ್ ಪಡೆದ ಕುರಿತು ಸೂಕ್ತ ತನಿಖೆ ನಡೆಸಲಿ- ಪರಮೇಶ್ವರ

Spread the love

ಹುಬ್ಬಳ್ಳಿ : ಗುತ್ತಿಗೆದಾರರ ಸಂಘದ ಕೆಂಪಣ್ಣ ಅವರು ಕಾಂಗ್ರೆಸ್ ನಿಂದ ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸುವ ಸರಕಾರವು ಆ ಬಗ್ಗೆ ತನಿಖೆ ನಡೆಸಲಿ.‌ ಆಗ ಯಾರು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗುತ್ತದೆ. ಹೇಗಿದ್ದರೂ ರಾಜ್ಯದಲ್ಲಿ ಬಿಜೆಪಿಯದ್ದೇ ಸರಕಾರವಿದೆ ಎಂದು ಕಾಂಗ್ರೆಸ್ ಶಾಸಕ ಡಾ. ಜಿ. ಪರಮೇಶ್ವರ ಹೇಳಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುವುದಾದರೆ ಆ ಬಗ್ಗೆ ಸರಕಾರ ತನಿಖೆ ಮಾಡಲಿ. ಆಗ ಬಿಜೆಪಿಯವರು ತಗೊಂಡಿದ್ದಾರೊ ಅಥವಾ ನಾವು ಪಡೆದಿದ್ದೇವೋ ಗೊತ್ತಾಗುತ್ತದೆ ಎಂದು ಸವಾಲು ಹಾಕಿದರು.
ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಸಂಘ (ರುಪ್ಸಾ) ಸಹ ಪ್ರಧಾನಿಗೆ ಪತ್ರ ಬರೆದಿದೆ. ಆ ಮೂಲಕ ಈ ಸರಕಾರವು ಇಲಾಖಾವಾರು ನಡೆಸುತ್ತಿರುವ ಭ್ರಷ್ಟಾಚಾರವು ಜಗಜ್ಜಾಹೀರಾಗುತ್ತಿದೆ. ಮುಂದೆ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ಇಂತಹ ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಲಾಗುವುದು ಎಂದರು.
ಇತಿಹಾಸದ ಪಕ್ಷದಲ್ಲಿ ಇದು ಸಾಮಾನ್ಯ:
137 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ನಲ್ಲಿ ಹಲವು ನಾಯಕರು ಪಕ್ಷ ತೊರೆದಿದ್ದಾರೆ ಮತ್ತು ಒಡಕು ಮಾಡಿದದ್ದಾರೆ. ಅದಕ್ಕೆ ಈಗ ಗುಲಾಂ ನಬಿ ಆಜಾದ್ ಸಹ ಸೇರಿದ್ದಾರೆ. ಇಂತಹ ಬೆಳವಣಿಗೆಗಳು ಪಲ್ಷದಲ್ಲಿ ನಡೆಯುತ್ತಲೇ ಇರುತ್ತವೆ. ಇಲ್ಲಿಂದ ಬೇರೆ ಪಕ್ಷಕ್ಕೆ ಹೋದವರು ಅಲ್ಲಿ ದೊಡ್ಡ ನಾಯಕರಾಗಿದ್ದಾರೆ. ಇವೆಲ್ಲದರ ನಡುವೆಯೂ ಪಕ್ಷ ಉಳಿದಿದೆ. ಹೊಸ ನಾಯಕತ್ವ ಹುಟ್ಟಿಕೊಳ್ಳುತ್ತಲೇ ಇರುತ್ತದೆ. ದೇಶದ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರಿದ್ದು, ಅವರೇ ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ ಎಂದರು.


Spread the love

About Karnataka Junction

    Check Also

    ನೇಹಾ ಕೊಲೆ‌ ಪ್ರಕಾರಣ: ಕೊಲೆ ಆರೋಪಿ ಫಯಾಜ್ ಕೊಲೆಯಾದ ಸ್ಥಳಕ್ಕೆ ಮಹಜರು

    Spread the loveಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ …

    Leave a Reply

    error: Content is protected !!