ಹುಬ್ಬಳ್ಳಿ: ನವನಗರ ಬಳಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಮುಂಭಾಗ ನುಜ್ಜುಗುಜ್ಜಾಗಿದ್ದು ಲಾರಿ ಚಾಲಕ ಪರಾರಿಯಾಗಿದ್ದಾನೆ.
ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತಿದ್ದಾಗ ಲಾರಿ ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.ಸ್ವಲ್ಪದರಲ್ಲೇ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.
