ಧಾರವಾಡ; ಕೇಲ ದಿನಗಳಿಂದ ಸುರಿದ ಮಳೆಯಿಂದ ತಾಲೂಕಿನ ತಡಕೋಡ ಗ್ರಾಮದಲ್ಲಿ ಮನೆಯ ಗೋಡೆಯೊಂದು ಕುಸಿದು ತಾಯಿ ಹಾಗೂ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಗ್ರಾಮದ ಹರಿಜನಕೆರಿಯ ರುದ್ರಪ್ಪ ಮೇಲಿನಮನಿ ಎಂಬುವವರ ಮನೆ ಮಳೆಯಿಂದಾಗಿ ಎರಡು ಮನೆಗಳು ಕುಸಿದು ಬಿದ್ದು. ತಾಯಿ ಹಾಗೂ ೪ ಜನ ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬಸ್ಥರು ಗಾಯಗೊಂಡಿದ್ದಾರೆ. ಸಂಗೀತಾ ಮೇಲಿನಮನಿ (11) ಶ್ರಾವಣಿ ಮೇಲಿನಮನಿ (9) ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು ಪ್ರಾಣಾಯಾಮದಿಂದ ಪಾರಾಗಿದ್ದಾರೆ.
ನೆರೆ ಹೊರೆಯವರು
ಸೇರಿ ಕುಟುಂಬಸ್ಥರನ್ನು ರಕ್ಷಣೆ ಮಾಡಿದ್ದು ಸ್ಥಳೀಯರು ಕೂಡಲೆ ಕಾರ್ಯ ಪ್ರವೃತ್ತರಾಗಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
