Breaking News

ಸಹಕಾರ ಸಂಘಗಳು ಆರ್ಥಿಕವಾಗಿ ದುರ್ಬಲರ ನೆರವಿಗೆ ಮುಂದಾಗಬೇಕು; ಬಾಳೆಹೊನ್ನೂರಿನ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಸಲಹೆ

Spread the love

ಹುಬ್ಬಳ್ಳಿ: ಯಾವುದೇ ಸಹಕಾರದಿಂದ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ. ಪರಸ್ಪರ ಸಹಕಾರ ಮತ್ತು ನಂಬಿಕೆಯಿಂದ ಶ್ರೇಯೋಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
ವಿದ್ಯಾನಗರದ ರಂಭಾ‍ಪುರಿ ವೀರಗಂಗಾಧರ ಸಮುದಾಯ ಭವನದಲ್ಲಿ ನಡೆದ ರೇಣುಕಾಚಾರ್ಯ ಕೋ–ಆಪ್‌ ಕ್ರೆಡಿಟ್‌ ಸೊಸೈಟಿಯ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕೆಂದು ಬಯಸುವುದು ಸಹಜ. ಇದಕ್ಕೆ ನಿರಂತರ ಪ್ರಯತ್ನ ಅಗತ್ಯ. ಆಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ. ಅಂತೆಯೇ ಸಹಕಾರ ಸಂಘಗಳು ಅಭಿವೃದ್ಧಿ ಸಾಧಿಸಿ, ಆರ್ಥಿಕವಾಗಿ ದುರ್ಬಲವಿರುವವರ ನೆರವಿಗೆ ಮುಂದಾಗಬೇಕು’ ಎಂದರು.
ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ಸಹಕಾರಿ ಸಂಘಗಳು ಹಿಂದೆಂದಿಗಿಂತಲೂ ಬಲಾಢ್ಯವಾಗಿ ಬೆಳೆಯುತ್ತಿವೆ. ರೇಣುಕಾಚಾರ್ಯರ ಹೆಸರಿನಲ್ಲಿ ಪ್ರಾರಂಭಗೊಂಡ ಸಹಕಾರ ಸಂಘ ಅನೇಕ ಬದಲಾವಣೆಗಳನ್ನು ಕಂಡಿದೆ’ ಎಂದು ಅಭಿಪ್ರಾಯಪಟ್ಟರು.
ಸುಳ್ಳ ಶಿವಸಿದ್ಧರಾಮೇಶ್ವರ ಸ್ವಾಮೀಜಿ, ಶಿರಕೋಳ ಗುರುಸಿದ್ಧೇಶ್ವರ ಸ್ವಾಮೀಜಿ, ಅಮ್ಮಿನಬಾವಿ ಅಭಿನವ ಶಾಂತಲಿಂಗ ಸ್ವಾಮೀಜಿ, ನರಗುಂದ ಸಿದ್ಧಲಿಂಗ ಸ್ವಾಮೀಜಿ ಇದ್ದರು. ರುದ್ರಪ್ಪ ಹಲಗತ್ತಿ, ಶಿವಲೀಲಾ, ಆರ್‌.ಟಿ ಪೋಳ್‌, ಎ.ಎಂ.ಮುಶಾಪುರಿ, ಸವಿತಾ ರಮೇಶ ಪಾತ್ರೋಟಿ, ಪ್ರಕಾಶ ಬೆಂಡಿಗೇರಿ, ವಿಶ್ವನಾಥ ಹಿರೇಗೌಡ ಸೇರಿದಂತೆ ಹಲವು ಗಣ್ಯರಿಗೆ ಗೌರವ ಗುರುರಕ್ಷೆ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸೊಸೈಟಿಯ ಅಧ್ಯಕ್ಷ ಶಿವಪುತ್ರಪ್ಪ ಅಂಗಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ದೀಪಾ ಪಟ್ಟಣಶೆಟ್ಟಿ ಸ್ವಾಗತಿಸಿದರು.


Spread the love

About Karnataka Junction

[ajax_load_more]

Check Also

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ – ರಾಜಣ್ಣ ಕೊರವಿ

Spread the loveಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ ಆಗಿದೆ ಎಂದು ಶ್ರೀ …

Leave a Reply

error: Content is protected !!