https://youtu.be/aU0UynSaJxQ
ಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಹುಬ್ಬಳ್ಳಿಯ ವಾರ್ಡ್ ನಂ. 47 ರ ಕೇಶ್ವಾಪೂರ ಸರ್ಕಲ್ ನಿಂದ ಗದಗ ರಸ್ತೆ ಸಂಪರ್ಕಿಸುವ ಮುಖ್ಯ ರಸ್ತೆಯ ಕಾಂಕ್ರೀಟ್ ಕಾಮಗಾರಿಯನ್ನು ವೀಕ್ಷಿಸಿ, ಪ್ರಗತಿ ಪರಿಶೀಲಿಸಿದರು.
ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಜಲ ಮಂಡಳಿ ಹಾಗೂ ವಿದ್ಯುತ್ ನಿಗಮದ ಅಧಿಕಾರಿಗಳು ತಮ್ಮ ಕೆಲಸವನ್ನು ಪೂರ್ಣಗೊಳಿಸಿ ರಸ್ತೆ ಕಾಗಮಗಾರಿಗೆ ಅನುವು ಮಾಡಿಕೊಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಹೇಂದ್ರ ಕೌತಾಳ, ಸ್ಥಳೀಯ ಪ್ರಮುಖರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.