ಹುಬ್ಬಳ್ಳಿ; ಭಾರತದ ರಾಜಕೀಯ ಇತಿಹಾಸದಲ್ಲಿ ಸ್ವಾತಂತ್ರ್ಯದ ಮೊದಲು ಸ್ವಾತಂತ್ರ್ಯದ ನಂತರ ನಾಡು ನುಡಿಗಾಗಿ ದೇಶದ ಸರ್ವಾಂಗೀಣತೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು 15 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ರಾಷ್ಟ್ರದ ಒಳ ಹೊರಗಿನ ಪ್ರತಿರೋಧಗಳನ್ನು ಮೆಟ್ಟಿ ನಿಂತು ಜಾಗತಿಕ ಮಟ್ಟದಲ್ಲಿ ಭಾರತವನ್ನು ಉತ್ತುಂಗ ಸ್ಥಾನಕ್ಕೇರಿಸಿದ ಕೀರ್ತಿ ದಿ ಮಾಜಿ ಪ್ರಧಾನಿ ಇಂದಿರಾಗಾಂಧಿಜಿಯವರಿಗೆ ಸಲ್ಲುತ್ತದೆ ಉಕ್ಕಿನ ಮಹಿಳೆ ಇಂದಿರಾಗಾಂಧಿಜಿಯವರನ್ನು 20 ನೇಯ ಶತಮಾನದ ಧೀರ ಮಹಿಳೆ ಎಂದು ಕೇಂದ್ರ ಸರ್ಕಾರ ಘೋಷಿಸಬೇಕೆಂದು ಕಾಂಗ್ರೆಸ್ ವಕ್ತಾರ ಗಂಗಾಧರ ದೊಡವಾಡ ಹೇಳಿದರು ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಮಹಾನಗರ ಜಿಲ್ಲಾ ಕಾಂಗ್ರೆಸ್ ಸೇವಾದಳ ಹಮ್ಮಿಕೊಂಡ ಇಂದಿರಾಜಿಯವರ 38ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಸ್ವತಃ ರಾಷ್ಟ್ರದ ಹಿತಕ್ಕಾಗಿ ಕಠಿಣ ನಿರ್ಧಾರ ತೆಗೆದುಕೊಂಡ ಇಂದಿರಾಜಿಯವರು ಸ್ವಂತ ಅಂಗರಕ್ಷಕರ ದಾಳಿಗೆ ತುತ್ತಾಗಿ ಪ್ರಾಣ ತೆತ್ತರೂ ಸಹ ಅವರು ಜಾರಿಗೆ ತಂದ ಯೋಜನೆಗಳು ಇಂದಿಗೂ ಜೀವಂತವಾಗಿವೆ ಎಂದೂ ಹೇಳಿದರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ವಾಯುವ್ಯ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ ಮುಂತಾದವರು ಉಪಸ್ಥಿತರಿದ್ದರು.
Check Also
ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ
Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …