ಹುಬ್ಬಳ್ಳಿ; 2023 ರ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ನಿಯೋಜಿತ ಅಭ್ಯರ್ಥಿಗಳ ತರಬೇತಿ ಶಿಬಿರದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಪ್ರಕಾಶ ಅಂಗಡಿ ವಕೀಲರು ಭಾಗವಹಿಸಿದ್ದರು. ಮತ್ತು ಇದೇ ಸಂದರ್ಭದಲ್ಲಿ ಅಭಿವೃದ್ಧಿ ಹರಿಕಾರರು ಮಾಜಿ ಮುಖ್ಯ ಮಂತ್ರಿಗಳಾದ ಶ್ರೀ ಎಚ್ ಡಿ ಕುಮಾರಸ್ವಾಮಿಗಳಿಗೆ ಶಾಲು ಹೋದಿಸಿ ಸನ್ಮಾನಿಸಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಅಧ್ಯಕ್ಷರಾದ ಶ್ರೀ ಸಿ ಎಮ್ ಇಬ್ರಾಹಿಂ, ಯುವ ರಾಜ್ಯ ಘಟಕದ ಅಧ್ಯಕ್ಷರಾದ ನಿಖೀಲ್ ಕುಮಾರಸ್ವಾಮಿ ಹಾಗೂ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಬಿ ಬಿ ಗಂಗಾಧರಮಠ ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.
