ಬೆಳಗಾವಿ: ಬೆಳಗಾವಿ ಸುವರ್ಣಸೌಧ ವರ್ಷದಲ್ಲಿ ಹತ್ತು ದಿನ ಕಾರ್ಯ ನಡೆಯುತ್ತದೆ, ಉಳಿದ ೩೪೦ ದಿನ ಕಾಲಿ ಇರುತ್ತದೆ. ಖಾಲಿ ಸಮಯದಲ್ಲಿ ನನ್ನ ಐದು ವರ್ಷದ ಮಗಳ ಹುಟ್ಟು ಹಬ್ಬಕ್ಕೆ ಸುವರ್ಣಸೌಧ ಬಾಡಿಗೆ ಕೊಡಿ ಎಂದು ಸಭಾಪತಿಗೆ ಹಾಗೂ ಜಿಲ್ಲಾಧಿಕಾರಿಗೆ ತಂದೆ ಒರ್ವ ಪತ್ರ ಬರೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ನಿವಾಸಿ ಮಲ್ಲಿಕಾರ್ಜುನ ಚೌಕಾಶಿ ಎಂಬುವರು ಪತ್ರ ಬರೆದಿದ್ದಾರೆ. ಉಳಿದ ಸಮಯದಲ್ಲಿ ಸುವರ್ಣಸೌಧ ಭೂತ ಬಂಗಲೆಯಂತೆ ಆಗುತ್ತದೆ. ಇದರಿಂದ ಶುಭ ಕಾರ್ಯಗಳಿಗೆ ಬಾಡಿಗೆ ಕೊಟ್ಟರೆ ಒಳ್ಳೆಯದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರತಿವರ್ಷ ಚಳಿಗಾಲದ ಅಧಿವೇಶನಕ್ಕೆ ಮಾತ್ರ ಸುವರ್ಣ ವಿಧಾನಸೌಧದ ಬಳಕೆಯಾಗುತ್ತದೆ. ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರ ಮಾಡುವಂತೆ ಮುಖ್ಯಮಂತ್ರಿ ಅವರನ್ನು ಕೇಳಿದರು ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಹತ್ತು ದಿನ ಅಧಿವೇಶನಕ್ಕೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತದೆ, ಈ ಖರ್ಚು ಸರಿ ಹೊಂದಿಸಲು ಬಾಡಿಗೆ ಕೊಟ್ಟರೆ ಒಳ್ಳೆಯದು ಎಂದು ಹೇಳಿದ್ದಾರೆ.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …