ಧಾರವಾಡ: ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲೆಂದು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ನಡೆದಿದೆ.ಬಳ್ಳಾರಿಯಿಂದ ಅನೇಕ ಜನ ಅಂಗನವಾಡಿ ಕಾರ್ಯಕರ್ತೆಯರು ಬಸ್ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಪ್ರತಿಭಟನೆ ನಡೆಸಲೆಂದು ಹೊರಟಿದ್ದ ವೇಳೆ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಆರೇಳು ಜನ ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲ ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Check Also
ಜಿಲ್ಲಾ ಉಸ್ತುವಾರಿ ಕ್ಷೇತ್ರದಲ್ಲಿಯೇ ಕೈ ಅಭ್ಯರ್ಥಿ ವಿನೋದ ಅಸೂಟಿಗೆ ಹಿನ್ನಡೆ
Spread the loveಗೆಲುವು ಸಾಧಿಸುತಿದ್ದಂತೆ ದೆಹಲಿಗೆ ತೆರಳಿದ ಪ್ರಲ್ಹಾದ್ ಜೋಶಿ ವಿವಿಧ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದ ನೂತನ ಸಂಸದರು …