Breaking News

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿ ಶಾಸಕ ಅರವಿಂದ ಬೆಲ್ಲದ ಹರ್ಷ

Spread the love

ಹುಬ್ಬಳ್ಳಿ: ಸುಮಾರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮಹದಾಯಿ
ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದೀಜಿ, ಕೇಂದ್ರ ಗೃಹ ಸಚಿವರಾದ ಅಮಿತ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರಸಿಂಗ ಶೇಖಾವತ ಅವರಿಗೆ ಅನಂತ ಧನ್ಯವಾದಗಳನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ ಹರ್ಷ. ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷ ಸಿದ್ಧವಾಗಿದ್ದು ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರಿಗೆ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅನಂತ ಧನ್ಯವಾದಗಳನ್ನ ತಿಳಿಸಿದ್ದಾರೆ.


Spread the love

About Karnataka Junction

    Check Also

    ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ*

    Spread the loveಹುಬ್ಬಳ್ಳಿ ಮಾ.3: ಇಂದು ಚಿಟಗುಪ್ಪಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ 5 ವರ್ಷದೊಳಗಿನ ಮಕ್ಕಳಿಗೆ …

    Leave a Reply