ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಮಹದಾಯಿ ಬೃಹತ್ ಆಂದೋಲನಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ಹೌದು.ಹುಬ್ಬಳ್ಳಿ ನೆಹರು ಮೈದನಾದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶಕ್ಕೆ ರಣಕಹಳೆ ಮೊಳಗಿಸಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಅಲ್ಲದೇ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್, ಎಚ್.ಕೆ.ಪಾಟೀಲ ಸೇರಿದಂತೆ ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಳಸಾ ಬಂಡೂರಿ ,ಮಹದಾಯಿ ಸಮಗೃ ಅಭಿವೃದ್ಧಿ ಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಬೃಹತ್ ಸಮಾವೇಶಕ್ಕೆ ಕೈ ನಾಯಕರ ಸಮಾಗಮದಲ್ಲಿ ಚಾಲನೆ ನೀಡಲಾಯಿತು.
